ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಾಳೆಯವರೆಗೂ ಮೊಡಮುಸುಕಿದ ವಾತಾವರಣ!

ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ಉಂಟಾದ ನಾಡ ಚಂಡಮಾರುತದಿಂದಾಗಿ ತಮಿಳುನಾಡು ಮತ್ತು ಪುದುಚೇರಿಯಲ್ಲಿ ಮಳೆ ಮುಂದುವರೆದಿರುವಂತೆಯೇ ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿಯೂ ಮಳೆಯಾಗುತ್ತಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ಉಂಟಾದ ನಾಡ ಚಂಡಮಾರುತದಿಂದಾಗಿ ತಮಿಳುನಾಡು ಮತ್ತು ಪುದುಚೇರಿಯಲ್ಲಿ ಮಳೆ ಮುಂದುವರೆದಿರುವಂತೆಯೇ ಕರ್ನಾಟಕ ರಾಜಧಾನಿ  ಬೆಂಗಳೂರಿನಲ್ಲಿಯೂ ಮಳೆಯಾಗುತ್ತಿದೆ.

ನಿನ್ನೆ ಸಂಜೆಯಿಂದಲೇ ಆರಂಭವಾದ ಮಳೆ ಇಂದು ಬೆಳಗ್ಗೆ ಕೂಡ ಮುಂದುವರೆದಿದ್ದು, ಮುಂಜಾನೆಯಿಂದಲೇ ನಗರಾದ್ಯಂತ್ಯ ತುಂತುರು ಮಳೆಯಾಗುತ್ತಿದೆ. ಮತ್ತೊಂದೆಡೆ ನಾಡ ಚಂಡಮಾರುತ ದುರ್ಬಲಗೊಂಡಿದೆಯಾದರೂ  ರಾಜ್ಯದ ಹಲವೆಡೆ ಮೊಡ ಮುಸುಕಿದ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಂತೆಯೇ ಬೆಂಗಳೂರಿನಲ್ಲಿ ಇನ್ನೂ ಎರಡು ದಿನಗಳ ತುಂತುರು ಮಳೆಯಾಗಲಿದೆ ಎಂದು ತಜ್ಞರು ಹೇಳಿದ್ದಾರೆ.

ಪ್ರಮುಖವಾಗಿ ಕರ್ನಾಟಕ ಮತ್ತು ತಮಿಳುನಾಡು ಭಾಗದ ಗಡಿ ಭಾಗಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com