ಇಂದು ಬೆಳಗ್ಗೆ 8.30ರ ಸುಮಾರಿಗೆ ಈ ಅಗ್ನಿ ಅವಘಡ ಸಂಭವಿಸಿದ್ದು, ಆರು ಬಸ್ ಗಳಲ್ಲಿ ಬಿಇಎಲ್ ಶಾಯೆ ವಿದ್ಯಾರ್ಥಿಗಳನ್ನು ಒಂದು ದಿನದ ಪ್ರವಾಸಕ್ಕಾಗಿ ಶ್ರೀರಂಗಪಟ್ಟಣಕ್ಕೆ ಕರೆದೊಯ್ಯುತ್ತಿದ್ದ ವೇಳೆ ಮದುಗೆರೆ ಬಳಿ ತಾಂತ್ರಿಕ ದೋಷದಿಂದ ಒಂದು ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಎಚ್ಚೆತ್ತುಕೊಂಡ ಚಾಲಕ ಬಸ್ ನಿಲ್ಲಿಸಿ ಮಕ್ಕಳನ್ನು ಕೆಳಗಿಳಿಸಿದ್ದುದರಿಂದ ಭಾರಿ ಅನಾಹುತ ತಪ್ಪಿದೆ.