ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರಿಸುವಂತೆ ಬಿಬಿಎಂಪಿ ಗೆ ಸಿಎಂ ಸೂಚನೆ

ಒತ್ತುವರಿ ತೆರವು ಕಾರ್ಯಾಚರಣೆಯನ್ನು ಮತ್ತೆ ಮುಂದುವರಿಸುವಂತೆ ಸಿಎಂ ಸಿದ್ದರಾಮಯ್ಯ ಬಿಬಿಎಂಪಿ ಆಯುಕ್ತರಿಗೆ
ಬಿಬಿಎಂಪಿ ಅಧಿಕಾರಿಗಳ ಜೊತೆ ಸಿಎಂ ಸಭೆ
ಬಿಬಿಎಂಪಿ ಅಧಿಕಾರಿಗಳ ಜೊತೆ ಸಿಎಂ ಸಭೆ
Updated on: 

ಬೆಂಗಳೂರು: ಒತ್ತುವರಿ ತೆರವು ಕಾರ್ಯಾಚರಣೆಯನ್ನು ಮತ್ತೆ ಮುಂದುವರಿಸುವಂತೆ ಸಿಎಂ ಸಿದ್ದರಾಮಯ್ಯ ಬಿಬಿಎಂಪಿ ಆಯುಕ್ತರಿಗೆ ಸೂಚಿಸಿದ್ದಾರೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತರ ಜೊತೆ ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು,  ಬಿಬಿಎಂಪಿ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ಉಂಟಾಗಬಹುದಾದ ಅನಾಹುತ ತಡೆಯಲು ಮಳೆ ನೀರು ಕಾಲುವೆ, ರಾಜಕಾಲುವೆಗಳ ಒತ್ತುವರಿ ತೆರವು ಕಾರ್ಯಾಚರಣೆಗೆ ಸೂಚಿಸಲಾಗಿತ್ತು. ಆದರೆ ಏಕಾಏಕಿ ತೆರವು ಕಾರ್ಯಾಚರಣೆ ವೇಗ ಕಳೆದುಕೊಂಡಿದೆ. ಇದಕ್ಕೆ ಕಾರಣವೇನು ಎಂದು ಕೇಳಿದರು.

ಈ ವೇಳೆ ಮಾತನಾಡಿದ ಬಿಬಿಎಂಪಿ ಆಯುಕ್ತ ಮಂಜುನಾಥಪ್ರಸಾದ್‌ , ಸರ್ವೆಯರ್‌ಗಳು ಮಾತೃ ಇಲಾಖೆಗೆ ವಾಪಸ್‌ ಹೋಗಿದ್ದರಿಂದ 20 ದಿನಗಳ ಕಾಲ ಕಾರ್ಯಾಚರಣೆ ನಿಲ್ಲಿಸಬೇಕಾಯಿತು. ಸರ್ವೆಯರ್‌ಗಳನ್ನು ವಿವಿಧ ಇಲಾಖೆಗಳಿಂದ ವಾಪಸು ಕರೆಸಿಕೊಂಡಿದ್ದು, ನಾಳೆಯಿಂದಲೇ ಕಾರ್ಯಾಚರಣೆ ಆರಂಭಿಸುವುದಾಗಿ ಹೇಳಿದರು.

ನಗರೋತ್ಥಾನ ಯೋಜನೆ ಹಾಗೂ ಮುಖ್ಯಮಂತ್ರಿ ವಿಶೇಷ ನಿಧಿ ಸೇರಿ ಒಟ್ಟು 7300 ಕೋಟಿ ಅನುದಾನ ಪಾಲಿಕೆಗೆ ದೊರೆಯಲಿದೆ. ಈ ಪೈಕಿ 2016-17ನೇ ಸಾಲಿಗೆ 3208 ಕೋಟಿ ರೂ. ಹಾಗೂ 2017-18ನೇ ಸಾಲಿಗೆ 4092 ಕೋಟಿ ರೂ. ಹಂಚಿಕೆಯಾಗಲಿದೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥಪ್ರಸಾದ್‌ ಸಭೆಗೆ ಮಾಹಿತಿ ನೀಡಿದರು. , ರೆಸಿಡೆನ್ಸಿ ರಸ್ತೆ, ರಿಚ್‌ಮಂಡ್‌ ರಸ್ತೆ, ನೃಪತುಂಗ, ಮೋದಿ ಆಸ್ಪತ್ರೆ ರಸ್ತೆ, ಸಿದ್ದಯ್ಯ ಪುರಾಣಿಕ್‌ ರಸ್ತೆ ಹಾಗೂ ಜಯನಗರ 11ನೇ ಮುಖ್ಯರಸ್ತೆ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದರು. ಗಾಂಧಿನಗರ, ಕಲಾಸಿಪಾಳ್ಯ, ಬ್ರಿಗೇಡ್‌ ರಸ್ತೆ, ಚರ್ಚ್‌ ಸ್ಟ್ರೀಟ್‌, ಮಲ್ಲೇಶ್ವರ ಮತ್ತು ಪ್ಯಾಲೆಸ್‌ ರಸ್ತೆಯ ಟೆಂಡರ್‌ಶ್ಯೂರ್‌ ಕಾಮಗಾರಿಗೆ ಸಂಬಂಧಿಸಿದಂತೆ ಯೋಜನಾ ವರದಿ ಸಿದ್ಧವಾಗುತ್ತಿದೆ ಎಂದು ವಿವರಣೆ ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com