

ಉಡುಪಿ: ಶಿರ್ವಾದ ಚರ್ಚ್ ಮೇಲೆ ದಾಳಿ ನಡೆಸಿರುವ ಕಿಡಿಗೇಡಿಗಳು ಚರ್ಚ್ ನಲ್ಲಿದ್ದ ಸೇಂಟ್ ಆಂಟೋನಿ ಮೂರ್ತಿಯನ್ನು ಭಗ್ನಗೊಳಿಸಿದ್ದಾರೆ.
ಚರ್ಚ್ ನಲ್ಲಿದ್ದ ಸೇಂಟ್ ಆಂಥೋನಿ ಮೂರ್ತಿಯನ್ನು ಸಂಪೂರ್ಣವಾಗಿ ಹಾಳುಮಾಡಲಾಗಿದೆ. ಜೊತೆಗೆ ಸೇಂಟ್ ಲಾರೆನ್ಸ್ ಮೂರ್ತಿಯನ್ನು ಸ್ಥಳಾಂತರಿಸಲಾಗಿದೆ.
ದುಷ್ಕರ್ಮಿಗಳು ನಡೆಸಿರುವ ಕಿಡಿಗೇಡಿ ಕೃತ್ಯ ನಿನ್ನೆ ಮಧ್ಯಾಹ್ನ ಬೆಳಕಿಗೆ ಬಂದಿದೆ. ಹೀಗಾಗಿ ಚರ್ಚ್ ಬಳಿ ಭದ್ರತೆಗೆ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.
ಚರ್ಚ್ ಬಳಿ ಹಾಕಿರುವ ಸಿಸಿಟಿವಿ ಕ್ಯಾಮರಾ ಕಾರ್ಯನಿರ್ವಹಿಸುತ್ತಲ್ಲ. ಹೀಗಾಗಿ ಅಕ್ಕ ಪಕ್ಕದಲ್ಲಿರುವ ಸಿಸಿಟಿವಿ ಕ್ಯಾಮರಾ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಉಡುಪಿಯ ಶಿರ್ವಾ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 295 ಅಡಿಯಲ್ಲಿ ಕೇಸು ದಾಖಲಾಗಿದೆ. ತನಿಖೆ ನಡೆಸಿ ಶೀಘ್ರವೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಉಡುಪಿ ಜಿಲ್ಲಾ ಎಸ್ ಪಿ ಬಾಲಕೃಷ್ಣನ್ ಹೇಳಿದ್ದಾರೆ. ಹೀಗಾಗಲೇ ಸಾಕ್ಷಿಗಳನ್ನು ಸಂಗ್ರಹಿಸಿದ್ದು, ಕೃತ್ಯದ ಹಿಂದಿನ ಉದ್ದೇಶ ಏನು ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.