
ಬೆಂಗಳೂರು: ಆಂಧ್ರ ಪ್ರದೇಶ ಮತ್ತು ತಮಿಳುನಾಡು ಕರಾವಳಿಯಲ್ಲಿ ಭಾರಿ ಆತಂಕ ಸೃಷ್ಟಿ ಮಾಡಿರುವ ವರ್ಧಾ ಚಂಡಮಾರುತದ ಪರಿಣಾಮ ಬೆಂಗಳೂರಿನ ಮೇಲೂ ಆಗಲಿದ್ದು, ಮಧ್ಯಾಹ್ಮದ ವೇಳೆಗೆ ಸಿಲಿಕಾನ್ ಸಿಟಿಯ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು ಉತ್ತರಭಾಗದಲ್ಲಿ ಮಧ್ಯಾಹ್ನದ ವೇಳೆಗೆ ಭಾರಿಯಾಗಲಿದ್ದು, ಬೆಂಗಳೂರಿನಿಂದ ತಮಿಳುನಾಡು ಸಂಪರ್ಕಿಸುವ ಆನೇಕಲ್, ಜಿಗಣಿ ಮತ್ತು ಇತರೆ ಪ್ರದೇಶಗಳಲ್ಲಿ ಭಾರಿಯಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೇವಲ ಬೆಂಗಳೂರು ಮಾತ್ರವಲ್ಲದೇ ಚಂಡಮಾರತದ ಪರಿಣಾಮ ಬಳ್ಳಾರಿ ಹಾಗೂ ಚಿತ್ರದುರ್ಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಜ್ಞರು ಹೇಳಿದ್ದಾರೆ.
ಬೆಂಗಳೂರಿನಲ್ಲು ಸುಮಾರು 17 ಮಿ.ಮೀ ಮಳೆಯಾಗಲಿದೆ ಎಂದು ಸ್ಕೈಮೇಟ್ ಹವಾಮಾನ ಸಂಸ್ಥೆ ತಿಳಿಸಿದೆ.
Advertisement