ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಕಾರ್ತಿಕ್ ಗೌಡ ವಿರುದ್ಧದ ವಂಚನೆ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

ಕೇಂದ್ರ ಸಚಿವ ಡಿವಿ ಸದಾನಂದಗೌಡ ಅವರ ಪುತ್ರ ಕಾರ್ತಿಕ್ ಗೌಡ ಅವರ ವಿರುದ್ಧ ದಾಖಲಾಗಿದ್ದ ವಂಚನೆ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ.

ಬೆಂಗಳೂರು: ಕೇಂದ್ರ ಸಚಿವ ಡಿವಿ ಸದಾನಂದಗೌಡ ಅವರ ಪುತ್ರ ಕಾರ್ತಿಕ್ ಗೌಡ ಅವರ ವಿರುದ್ಧ ದಾಖಲಾಗಿದ್ದ ವಂಚನೆ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ.

ತಮ್ಮನ್ನು ವಿವಾಹವಾಗಿ ಕಾರ್ತಿಕ್ ಗೌಡ ಅವರು ವಂಚಿಸಿದ್ದಾರೆ ಎಂದು ಆರೋಪಿಸಿ ನಟಿ ಮೈತ್ರಿಯಾ ಗೌಡ ಅವರು ಆರ್‌.ಟಿ. ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರನ್ನು ಆಧರಿಸಿ ಪೊಲೀಸರು ನ್ಯಾಯಾಲಯಕ್ಕೆ  ಚಾರ್ಜ್ ಶೀಟ್ ಸಲ್ಲಿಸಿದ್ದರು. ಆದರೆ ಈ ನಡುವೆ ಮೈತ್ರಿಯಾಗೌಡ ಅವರು ಸಲ್ಲಿಸಿದ್ದ ಅರ್ಜಿ ದುರುದ್ದೇಶಪೂರಕವಾದದ್ದು. ಹೀಗಾಗಿ ಅರ್ಜಿಯನ್ನು ವಜಾಗೊಳಿಸಬೇಕು ಎಂದು ಕಾರ್ತಿಕ್ ಗೌಡ ಹೈಕೋರ್ಟ್ ಮೆಟ್ಟಿಲೇರಿದ್ದರು.

ಈ ಪ್ರಕರಣದ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಪ್ರಕರಣವನ್ನು ರದ್ದುಗೊಳಿಸಿ ಆದೇಶ ನೀಡಿದೆ. ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಆನಂದ್ ಬೈರಾ ರೆಡ್ಡಿ ಅವರು, ಮೈತ್ರಿಯಾಗೌಡ ಅವರು  ಸಲ್ಲಿಸಿದ್ದ ದೂರನ್ನು ವಜಾಗೊಳಿಸಿದ್ದಲ್ಲದೇ ಕೆಳ ನ್ಯಾಯಾಲಯದಲ್ಲಿನ ವಿಚಾರಣೆಗೂ ಬ್ರೇಕ್ ಹಾಕಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com