ಶೀಘ್ರದಲ್ಲೇ ಇಬ್ಬರು ರಾಜಕಾರಣಿಗಳ ಸಿ.ಡಿ ಬಿಡುಗಡೆ: ರಾಜಶೇಖರ ಮುಲಾಲಿ

ಮಾಜಿ ಸಚಿವ ಎಚ್‌.ವೈ. ಮೇಟಿ ಅವರ ಲೈಂಗಿಕ ಹಗರಣದ ಸಿ.ಡಿ ಬಿಡುಗಡೆ ಮಾಡಿ ಭಾರಿ ಚರ್ಚೆಗೆ ಗ್ರಾಸವಾಗಿರುವ ಆರ್ ಟಿ ಐ ಕಾರ್ಯಕರ್ತ ರಾಜಶೇಖರ್ ಮುಲಾಲಿ ...
ಮದುವೆ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಆರ್ ಟಿ ಐ ಕಾರ್ಯಕರ್ತ ರಾಜಶೇಖರ ಮುಲಾಲಿ
ಮದುವೆ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಆರ್ ಟಿ ಐ ಕಾರ್ಯಕರ್ತ ರಾಜಶೇಖರ ಮುಲಾಲಿ
Updated on

ಧಾರವಾಡ: ಮಾಜಿ ಸಚಿವ ಎಚ್‌.ವೈ. ಮೇಟಿ ಅವರ ಲೈಂಗಿಕ ಹಗರಣದ ಸಿ.ಡಿ  ಬಿಡುಗಡೆ ಮಾಡಿ ಭಾರಿ ಚರ್ಚೆಗೆ ಗ್ರಾಸವಾಗಿರುವ ಆರ್ ಟಿ ಐ ಕಾರ್ಯಕರ್ತ ರಾಜಶೇಖರ್ ಮುಲಾಲಿ ಶೀಘ್ರವೇ ಮತ್ತಿಬ್ಬರು ರಾಜಕಾರಣಿಗಳ ಸಿ.ಡಿ  ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.

ಮದುವೆ ಸಮಾರಂಭವೊಂದರಲ್ಲಿ ಪಾಲ್ಲೊಂಡ ನಂತರ ಮಾತನಾಡಿದ ಅವರು ಇನ್ನೂ ಇಬ್ಬರು ರಾಜಕಾರಣಿಗಳ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿದೆ. ಆ ಸಿ.ಡಿಗಳನ್ನೂ ಕೆಲವೇ ದಿನಗಳಲ್ಲಿ ಬಿಡುಗಡೆ ಮಾಡುತ್ತೇನೆ ಎಂದರು.

ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಅವರನ್ನೂ ಭೇಟಿ ಮಾಡಿ ಹೋರಾಟದ ಬಗ್ಗೆ ಚರ್ಚೆ ನಡೆಸಿದ್ದೇನೆ. ಶೀಘ್ರ ಭ್ರಷ್ಟಾಚಾರ ನಿರ್ಮೂಲನೆಗೆ ದೊಡ್ಡ ಮಟ್ಟದ ಹೋರಾಟ ನಡೆಸಲಾಗುವುದು ಎಂದು ಮುಲಾಲಿ ಹೇಳಿದರು.

ಇತ್ತೀಚೆಗ ದೆಹಲಿಗೆ ತೆರಳಿ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದು, ಭ್ರಷ್ಟಾಚಾರದ ವಿರುದ್ಧ ಹೋರಾಟಕ್ಕೆ ಬೆಂಬಲ ನೀಡುವುದಾಗಿ ಅವರು ತಿಳಿಸಿರುವುದಾಗಿ ರಾಜಶೇಖರ್ ಮುಲಾಲಿ ತಿಳಿಸಿದ್ದಾರೆ. ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ತಮಗೆ ರಕ್ಷಣೆ ನೀಡಲು ಕೋರಿರುವುದಾಗಿ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com