ಎತ್ತಿನಹೊಳೆ ಯೋಜನೆ: ವಿರೋಧ ಶಮನ ಮಾಡಲು ಸಿಎಂ ಕರೆದಿದ್ದ ಸಭೆ ವಿಫಲ

ಎತ್ತಿನಹೊಳೆ ಯೋಜನೆಗೆ ವ್ಯಕ್ತವಾಗುತ್ತಿರುವ ವಿರೋಧ ಶಮನ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಕರೆದಿದ್ದ ಜನಪ್ರತಿನಿಧಿಗಳ ಸಭೆ ...
ಎತ್ತಿನ ಹೊಳೆ ಯೋಜನೆ ಸಂಬಂಧ ಸಿಎಂ ಸಭೆ
ಎತ್ತಿನ ಹೊಳೆ ಯೋಜನೆ ಸಂಬಂಧ ಸಿಎಂ ಸಭೆ

ಬೆಂಗಳೂರು: ಎತ್ತಿನಹೊಳೆ ಯೋಜನೆಗೆ ವ್ಯಕ್ತವಾಗುತ್ತಿರುವ ವಿರೋಧ ಶಮನ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಕರೆದಿದ್ದ ಜನಪ್ರತಿನಿಧಿಗಳ ಸಭೆ ವಿಫಲವಾಯಿತು.

ಸಂಸದ ನಳಿನ್‌ಕುಮಾರ್‌ ಕಟೀಲು, ಮಾಜಿ ಸಚಿವ ಕೃಷ್ಣ ಪಾಲೇಮಾರು, ಸೇರಿದಂದೆತ ಹಲವು ಬಿಜೆಪಿ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಬಿಸಿಬಿಸಿ ಚರ್ಚೆಗಳು ನಡೆದವು.

ಎತ್ತಿನಹೊಳೆಯಲ್ಲಿ ನೀರು ಸಿಗುವುದಿಲ್ಲ ಎಂದು ಗೊತ್ತಿದ್ದರೂ ಕಾಮಗಾರಿ ಕೈಗೆತ್ತಿಕೊಂಡು ಹಣ ಪೋಲು ಮಾಡಲಾಗುತ್ತಿದೆ. ವಾಸ್ತವವಾಗಿ ಸಿಗುವುದು ಕೇವಲ 6 ಟಿಎಂಸಿ ಅಡಿ ಮಾತ್ರ. ಯೋಜನೆಯಿಂದ ಕುಮಾರಧಾರಾ ನದಿಗೆ ತೊಂದರೆ ಆಗುವುದಿಲ್ಲ ಎಂದು  ಸರ್ಕಾರ ಸುಳ್ಳು ಹೇಳುತ್ತಿದೆ ಎಂದು ಬಿಜೆಪಿ ಜನ ಪ್ರತಿನಿಧಿಗಳು ಮತ್ತು ಚಳವಳಿಗಾರರು ಆರೋಪಿಸಿದರು.

ಕೋಲಾರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ರಾಮನಗರ, ಬೆಂಗಳೂರು ಗ್ರಾಮಾಂತರ, ತುಮಕೂರು ಜಿಲ್ಲೆಗೆ ಕುಡಿಯುವ ನೀರು ಕೊಂಡೊಯ್ಯಲು ವಿರೋಧಿಸುವುದಿಲ್ಲ. ಆದರೆ, ಎತ್ತಿನಹೊಳೆಯಲ್ಲಿ 24 ಟಿಎಂಸಿ ಅಡಿ ನೀರು ಸಂಗ್ರಹ ಸಾಧ್ಯವಿಲ್ಲ ಎಂದು ವಾದಿಸಿದರು.

ಬಿಜೆಪಿ ಸರ್ಕಾರವೇ ಯೋಜನೆಗೆ 2012ರಲ್ಲಿ ಆಡಳಿತಾತ್ಮಕ ಮಂಜೂರಾತಿ ನೀಡಿದೆ. ಪರಿಸರ ಸಚಿವಾಲಯವೂ ಒಪ್ಪಿಗೆ ಕೊಟ್ಟಿದೆ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ ಪಾಟೀಲ್ ಬಿಜೆಪಿ ಸದಸ್ಯರಿಗೆ ತಿರುಗೇಟು ನೀಡಿದರು. ರಾಜ್ಯ ಸರ್ಕಾರ ಎತ್ತಿನ ಹೊಳೆ ಯೋಜನೆ ಅನುಷ್ಠಾನಗೊಳಿಸಲು ಬದ್ಧವಾಗಿದೆ,  ಒಟ್ಟು 13, 000 ಕೋಟಿ ರು ವೆಚ್ಚದ ಯೋಜನೆ ಇದಾಗಿದ್ದು, ಈಗಾಗಲೇ 2,000 ಕೋಟಿ ವೆಚ್ಚವಾಗಿದೆ ಎಂದು ಅವರು ಹೇಳಿದ್ದಾರೆ.

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆ ಜನತೆ ಕುಡಿಯುವ ನೀರಿನ ಸಮಸ್ಯ ಎದುರಿಸುತ್ತಿದ್ದಾರೆ. ಎತ್ತಿನಹೊಳೆ ಯೋಜನೆಯಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ  ತೊಂದರೆ ಆಗುವುದಿಲ್ಲ.  ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ  ಕೆರೆಗಳಿಗೆ ನೀರು ತುಂಬಿಸುವುದಷ್ಟೇ ಯೋಜನೆಯ ಉದ್ದೇಶ. ವ್ಯವಸಾಯಕ್ಕೆ ನೀರು ಬಳಸುವುದಿಲ್ಲ. ಯಾವುದೇ ಪರಿಸ್ಥಿತಿಯಲ್ಲೂ ಯೋಜನೆ ನಿಲ್ಲುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com