ನಗರ ಪೊಲೀಸ್ ಆಯುಕ್ತ ಎನ್.ಎಸ್.ಮೇಘರಿಕ್ ಅವರಿಂದ ಅಧಿಕಾರ ಸ್ವೀಕರಿಸಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಮಹಿಳೆಯರಿಗೆ, ಮಕ್ಕಳಿಗೆ, ಹಿರಿಯ ನಾಗರಿಕರಿಗೆ ರಕ್ಷಣೆ ನೀಡುವುದು ನಮ್ಮ ಆದ್ಯ ಕರ್ತವ್ಯ. ಅದಕ್ಕೆ ಪೂರಕವಾಗಿ ಕೆಲಸ ಮಾಡುತ್ತೇನೆ. ಅತ್ಯಾಚಾರ ಪ್ರಕರಣಗಳೂ ಸೇರಿದಂತೆ ಅಪರಾಧ ಪ್ರಕರಣಗಳನ್ನು ನಿಯಂತ್ರಿಸಿ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವುದು ನಮ್ಮ ಜವಾಬ್ದಾರಿ. ಅದನ್ನು ನಿಭಾಯಿಸುತ್ತೇವೆ ಎಂದು ಭರವಸೆ ನೀಡಿದರು.