ತಾಲ್ಲೂಕು ಪಂಚಾಯ್ತಿ ನಲ್ಲೂ 'ಕೈ' ಮೇಲೆ

ಬಹುನಿರೀಕ್ಷಿತ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿ ಚುನಾವಣೆ ಫಲಿತಾಂಶ ಹೊರಬಿದ್ದಿದೆ. ರಾಜ್ಯ ಕಾಂಗ್ರೆಸ್ ಮತ್ತು ಪ್ರಮುಖ ವಿರೋಧ ಪಕ್ಷಗಳಾದ ರಾಜಕೀಯ ಬದಲಾವಣೆಯ ದಿಕ್ಸೂಚಿ ಎಂದೇ ಭಾವಿಸಲಾಗಿದ್ದ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಬಹುನಿರೀಕ್ಷಿತ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿ ಚುನಾವಣೆ ಫಲಿತಾಂಶ ಬಹುತೇಕ ಹೊರಬಿದ್ದಿದೆ. ರಾಜ್ಯ ಕಾಂಗ್ರೆಸ್ ಮತ್ತು ಪ್ರಮುಖ ವಿರೋಧ ಪಕ್ಷಗಳಾದ ರಾಜಕೀಯ ಬದಲಾವಣೆಯ ದಿಕ್ಸೂಚಿ ಎಂದೇ ಭಾವಿಸಲಾಗಿದ್ದ ಪಂಚಾಯ್ತಿ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದೆ.ಬಿಜೆಪಿ ಎರಡನೇ ಸ್ಥಾನದಲ್ಲಿದ್ದು, ಜೆಡಿಎಸ್ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳುವಂತಾಗಿದೆ.

175 ತಾಲುಕುಗಳ 3,884 ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ತನ್ನ ಪ್ರಾಬಲ್ಯವಿರುವ ಕರಾವಳಿ ಹಾಗೂ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಾನ ಗಳಿಸಿದೆ. ಹಳೆ ಮೈಸೂರು ಭಾಗ ಹಾಗೂ ಹೈದರಾಬಾದ್- ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನ ಗಳಿಸಿದೆ. ಜೆಡಿಎಸ್ ಬೆಂಗಳೂರು ಗ್ರಾಮಾಂತರ, ಹಾಸನ, ಮಂಡ್ಯ, ಕೋಲಾರ ಜಿಲ್ಲೆಗಳಲ್ಲಿ ತನ್ನ ಅಸ್ತಿತ್ವವನ್ನು ಗಟ್ಟಿ ಮಾಡಿಕೊಂಡಿದೆ. ಚಾಮರಾಜನಗರ, ಹಾವೇರಿ, ಕೊಪ್ಪಳ, ರಾಮನಗರ, ಚಿತ್ರದುರ್ಗ, ದಾವಣಗೆರೆ, ಧಾರವಾಡ, ಗದಗ, ಚಿಕ್ಕಬಳ್ಳಾಪುರ, ಕಲಬುರಗಿ, ಬಳ್ಳಾರಿ, ರಾಯಚೂರು, ಬೀದರ್ ಮತ್ತಿತರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದೆ. ಬಿಜೆಪಿ ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ, ಉಡುಪಿ, ವಿಜಯಪುರ, ಬಾಗಲಕೋಟೆ, ಕೊಡಗು, ಯಾದಗಿರಿ ಮುಂತಾದ ಜಿಲ್ಲೆಗಳಲ್ಲಿ ಹೆಚ್ಚು ಸ್ಥಾನ ಗಳಿಸಿ ಎರಡನೇ ಸ್ಥಾನದಲ್ಲಿದೆ. ಜೆಡಿಎಸ್ ಹಾಸನದಲ್ಲಿ ಸ್ಪಷ್ಟ ಬಹುಮತ ಸಾಧಿಸಿದೆ. ಬೆಂಗಳೂರು ಗ್ರಾಮಾಂತರ, ಮಂಡ್ಯ, ಕೋಲಾರ ಜಿಲ್ಲೆಯಲ್ಲಿ ಹೆಚ್ಚು ಸ್ಛಾನ ಗಳಿಸಿದೆ.

ಈ ಚುನಾವಣೆಯಲ್ಲಿ ತಮ್ಮ ಪಕ್ಷವನ್ನು ಗೆಲ್ಲಿಸಲು ಪ್ರಮುಖ ಮುಖಂಡರು ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ್ದರು. ಜೆಡಿಎಸ್ ರಾಷ್ಟ್ರಾಧ್ಯಕ್ಷ  ಮಾಜಿ ಪ್ರಧಾನಿ ದೇವೇಗೌಡ, ಅವರ ಪುತ್ರ ಪಕ್ಷ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ, ಡಾ.ಜಿ.ಪರಮೇಶ್ವರ್, ಬಿಜೆಪಿಯ ಮುಖಂಡರಾದ ಸದಾನಂದ ಗೌಡ, ಅನಂತ ಕುಮಾರ್, ಬಿ.ಎಸ್.ಯಡಿಯೂರಪ್ಪ ಮೊದಲಾದ ನಾಯಕರು ತಮ್ಮ ಅಭ್ಯರ್ಥಿಗಳ ಪರ ಮತಯಾಚನೆ ಮಾಡಿದ್ದರು.

ತಾಲ್ಲೂಕು ಪಂಚಾಯ್ತಿಯ ಒಟ್ಟು 175 ಸ್ಥಾನಗಳ ಪೈಕಿ ಕಾಂಗ್ರೆಸ್ 58, ಬಿಜೆಪಿ 55, ಜೆಡಿಎಸ್ 21 ಹಾಗೂ ಇತರೆ ಪಕ್ಷಗಳು 41 ಸ್ಥಾನಗಳನ್ನು ಗೆದ್ದುಕೊಂಡಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com