'ಡಿ' ಗ್ರೂಪ್ ನೌಕರರಿಗೂ ಆಸ್ತಿ ವಿವರ ಸಲ್ಲಿಕೆ ಕಡ್ಡಾಯ

ಡಿ ಗ್ರೂಪ್ ನೌಕರರೂ ಕೂಡ ಕಡ್ಡಾಯವಾಗಿ ಆಸ್ತಿ ವಿವರ ಸಲ್ಲಿಸಬೇಕು ಎಂಬ ನಿರ್ಧಾರವನ್ನು ಸರ್ಕಾರ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಂಗಳೂರು: ಡಿ ಗ್ರೂಪ್ ನೌಕರರೂ ಕೂಡ ಕಡ್ಡಾಯವಾಗಿ ಆಸ್ತಿ ವಿವರ ಸಲ್ಲಿಸಬೇಕು ಎಂಬ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ.
ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡುತ್ತಿರುವ ಡಿ ಗ್ರೂಪ್ ನೌಕರರು ಪ್ರತಿ ವರ್ಷ ತಮ್ಮ ಆಸ್ತಿ ವಿವರಗಳನ್ನು ಸಲ್ಲಿಸುವುದನ್ನು ಕಡ್ಡಾಯಗೊಳಿಸಲು ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಿದೆ. 
ಇದುವರೆಗೆ ಎ, ಬಿ ಮತ್ತು ಸಿ ದರ್ಜೆ ನೌಕರರು ಮಾತ್ರ ಆಸ್ತಿ ವಿವರ ಸಲ್ಲಿಸುತ್ತಿದ್ದರು. ಈಗ ಕರ್ನಾಟಕ ನಾಗರಿಕ ಸೇವೆಗಳ ನಿಯಮಕ್ಕೆ ತಿದ್ದುಪಡಿ ಮಾಡಿ, ಡಿ ದರ್ಜೆ ನೌಕರರೂ ಆಸ್ತಿ ವಿವರ ಕಡ್ಡಾಯಗೊಳಿಸಲು ಸರ್ಕಾರ ತೀರ್ಮಾನಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com