ಲೈಂಗಿಕ ಕಿರುಕುಳ: ನ್ಯಾಯಾಧೀಶರೊಬ್ಬರನ್ನು ವಜಾಗೊಳಿಸಿದ ಸರ್ಕಾರ

ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ ಕೋರ್ಟ್...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಂಗಳೂರು: ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ ಕೋರ್ಟ್ ನ್ಯಾಯಾಧೀಶ ಎ.ಎನ್ ಹಕೀಮ್ ಅವರನ್ನು ರಾಜ್ಯ ಸರ್ಕಾರ ಸೇವೆಯಿಂದ ವಜಾಗೊಳಿಸಿದೆ. 
ನ್ಯಾಯಾಲಯದ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಎ.ಎನ್ ಹಕೀಮ್ ಅವರನ್ನು ರಾಜ್ಯ ಸರ್ಕಾರ ಸೇವೆಯಿಂದ ವಜಾಗೊಳಿಸಿದೆ. 
ಹಕೀಮ್ ಅವರು 4ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾಗಿ ಹಾಗೂ 3ನೇ ಹೆಚ್ಚುವರಿ ನ್ಯಾಯಾಲಯದ ಜಡ್ಜ್ ಆಗಿ ಕಾರ್ಯನಿರ್ವಹಿಸುತ್ತಿದ್ದ ವೇಳೆ ಅವರ ಅಧೀನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಜಡ್ಜ್ ಮೆಂಟ್ ರೈಟರ್, ಶೀಗ್ರ ಲಿಪಿಗಾರ್ತಿ ಸೇರಿದಂತೆ ನಾಲ್ವರು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ್ದರು ಎಂಬ ಆರೋಪ ಕೇಳಿಬಂದಿತ್ತು. 
ಈ ಸಂಬಂಧ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಹೈಕೋರ್ಟ್ ನ ನ್ಯಾಯಮೂರ್ತಿ ಎ.ಎನ್ ವೇಣುಗೋಪಾಲಗೌಡ ನೇತೃತ್ವದ ಸಮತಿ ರಚಿಸಿತ್ತು. ಸಮಿತಿ ವಿಚಾರಣೆ ನಡೆಸಿದ್ದು, ಆರೋಪ ಸಾಬೀತಾಗಿದೆ ಎಂದು ವರದಿ ನೀಡಿತ್ತು. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಕರ್ನಾಟಕ ನಾಗರಿಕ ಸೇವಾ ನಿಯಮಗಳು 1957ರ ನಿಯಮ 9ರಡಿ ವಜಾಗೊಳಿಸಿ ಆದೇಶ ಹೊರಡಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com