ಕೋರ್ಟ್ ಗಳು ತುಂಬಾ ನಿಧಾನ, ತ್ವರಿತ ವಿಚಾರಣೆಗೆ ವಿಶೇಷ ಕೋರ್ಟ್ ಸ್ಥಾಪಿಸಿ: ಬೆಂಗಳೂರು ಪೊಲೀಸ್

ಕೋರ್ಟ್ ಗಳು ತುಂಬಾ ನಿಧಾನವಾಗಿದ್ದು, ತ್ವರಿತ ವಿಚಾರಣೆಗೆ ವಿಶೇಷ ಕೋರ್ಟ್ ಸ್ಥಾಪಿಸುವಂತೆ ಬೆಂಗಳೂರು ನಗರ...
ಚಿತ್ರ ಕೃಪೆ- ಅಮಿತ್ ಬಂಡ್ರೆ
ಚಿತ್ರ ಕೃಪೆ- ಅಮಿತ್ ಬಂಡ್ರೆ
ಬೆಂಗಳೂರು: ಕೋರ್ಟ್ ಗಳು ತುಂಬಾ ನಿಧಾನವಾಗಿದ್ದು, ತ್ವರಿತ ವಿಚಾರಣೆಗೆ ವಿಶೇಷ ಕೋರ್ಟ್ ಸ್ಥಾಪಿಸುವಂತೆ ಬೆಂಗಳೂರು ನಗರ ಪೊಲೀಸರು ಸರ್ಕಾರಕ್ಕೆ ಕೇಳಿಕೊಂಡಿದ್ದಾರೆ.
ಕೇಂದ್ರ ಅಪರಾಧ ವಿಭಾಗ ತನಿಖೆ ನಡೆಸಿದ ಸುಮಾರು 900 ಪ್ರಕರಣಗಳು 63 ಕೋರ್ಟ್ ಗಳಲ್ಲಿ ವಿಚಾರಣೆಯಾಗದೆ ಬಾಕಿ ಉಳಿದಿವೆ. ಈ ಸಂಬಂಧ ನಗರ ಪೊಲೀಸ್ ಆಯುಕ್ತರು, ಪೊಲೀಸ್ ಮಹಾನಿರ್ದೇಶಕರಿಗೆ ಹಾಗೂ ಗೃಹ ಸಚಿವರಿಗೆ ಪತ್ರ ಬರೆದಿದ್ದು, ಈಗೀರುವ ಕೋರ್ಟ್ ಗಳಲ್ಲಿ ಪ್ರಕರಣದ ವಿಚಾರಣೆ ವಿಳಂಬವಾಗುತ್ತಿದ್ದು, ತ್ವರಿತ ವಿಚಾರಣೆಗೆ ವಿಶೇಷ ಕೋರ್ಟ್ ಸ್ಥಾಪಿಸುವಂತೆ ಮನವಿ ಮಾಡಿದ್ದಾರೆ.
ರಾಜ್ಯ ಸರ್ಕಾರಕ್ಕೆ ನಾವು ಪ್ರಸ್ತಾವನೆ ಸಲ್ಲಿಸಿದ್ದೇವೆ ಮತ್ತು ಇದಕ್ಕೆ ಸರ್ಕಾರ ಒಪ್ಪಿಗೆ ನೀರುವ ಭರವಸೆ ಇದೆ ಎಂದು ನಗರ ಪೊಲೀಸ್ ಆಯುಕ್ತ ಎನ್.ಎಸ್.ಮೇಘರಿಕ್ ಅವರು ತಿಳಿಸಿದ್ದಾರೆ.
ಮೂಲಗಳ ಪ್ರಕಾರ, ಗೃಹ ಸಚಿವ ಡಾ.ಜಿ.ಪರಮೇಶ್ವರ ಹಾಗೂ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಅವರು ಬೆಂಗಳೂರು ಪೊಲೀಸರ ಮನವಿ ಸ್ಪಂದಿಸಿದ್ದು, ಶೀಘ್ರದಲ್ಲೇ ವಿಶೇಷ ಕೋರ್ಟ್ ಸ್ಥಾಪನೆಯಾಗುವ ಸಾಧ್ಯತೆ ಇದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com