
ಬೆಂಗಳೂರು: ಸಿದ್ದರಾಮಯ್ಯ ದುಬಾರಿ ವಾಚ್ ಪ್ರಕರಣದ ವಿವಾದದಿಂದ ಉಂಟಾಗಿರುವ ರಾಜಕೀಯ ಪರಿಣಾಮಗಳ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ವಿಸ್ತೃತ ವರದಿ ಕೇಳಿದೆ.
ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರಿಂದ ಕಾಂಗ್ರೆಸ್ ಹೈಕಮಾಂಡ್ ವರದಿ ಕೇಳಿದ್ದು, ವಾಚ್ ವಿವಾದದಿಂದ ಉಂಟಾಗಿರುವ ರಾಜಕೀಯ ಪರಿಣಾಮಗಳ ಬಗ್ಗೆ ವಿವರಣೆ ನೀಡುವಂತೆ ಸೂಚಿಸಿದೆ. ಫೆ.26 ರಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ್ದ ಸಿದ್ದರಾಮಯ್ಯ ವಿಧಾನಸಭಾ ಉಪಚುನಾವಣೆ ಹಾಗೂ ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ ಸಾಧನೆ ಬಗ್ಗೆ ಮಾಹಿತಿ ನೀಡಿದ್ದರು.
ಈ ಭೇಟಿ ವೇಳೆಯಲ್ಲೇ ದುಬಾರಿ ವಾಚ್ ಪ್ರಕರಣವೂ ಚರ್ಚೆಗೆ ಬಂದಿದ್ದು, ತಮ್ಮ ಸ್ನೇಹಿತನಿಂದ ಗಿಫ್ಟ್ ಪಡೆದಿರುವುದಾಗಿ ಸಮರ್ಥನೆ ನೀಡಿದ್ದರು. ಇದಾದ ಬಳಿಕ ವಾಚ್ ಪ್ರಕರಣದಲ್ಲಿ ಅವ್ಯವಹಾರ ನಡೆದಿಲ್ಲ ಎಂವುದು ತಮ್ಮ ಸಮರ್ಥನೆ ಮೂಲಕ ಕಾಂಗ್ರೆಸ್ ವರಿಷ್ಠರಿಗೆ ಮನವರಿಕೆಯಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದರು.
ಆದರೆ ಈಗ ಸಿದ್ದರಾಮಯ್ಯ ಅವರಿಗೆ ವಾಚ್ ನ್ನು ಉಡುಗೊರೆ ನೀಡಿದ್ದ ಅವರ ಸ್ನೇಹಿತನ ವಿವರ ಹಾಗೂ ವಿವಾದದಿಂದ ಉಂಟಾಗಿರುವ ರಾಜಕೀಯ ಪರಿಣಾಮಗಳ ಬಗ್ಗೆ ವರದಿ ನೀಡುವಂತೆ ರಾಜ್ಯ ಉಸ್ತುವಾರಿಗೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿದೆ.
Advertisement