
ಸುಳ್ಯ: ಪವರ್ ಕಟ್ ಸಮಸ್ಯೆಗಾಗಿ ಇಂಧನ ಸಚಿವ ಡಿ.ಕೆ. ಶಿವಕುಮಾರ್ಗೆ ದೂರವಾಣಿ ಕರೆ ಮಾಡಿ ನಿಂದಿಸಿದ ಆರೋಪದಲ್ಲಿ ಸುಳ್ಯ ತಾಲೂಕಿನ ಬೆಳ್ಳಾರೆಯ ಸಾಯಿ ಗಿರಿಧರ ರೈ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.
ವಿದ್ಯುತ್ ಸಮಸ್ಯೆ ತೀವ್ರಗೊಂಡಿದ್ದು, ಬೆಳ್ಳಾರೆ ಸುತ್ತಮುತ್ತ ಕೆಲವು ದಿನಗಳಿಂದ ನಿರಂತರ ವಿದ್ಯುತ್ ಕಡಿತ ಉಂಟಾಗುತ್ತಿದೆ. ಇದರಿಂದ ರೋಸಿ ಹೋಗಿದ್ದ ಗಿರಿಧರ ರೈ, ಭಾನುವಾರ ರಾತ್ರಿ ವಿದ್ಯುತ್ ಕಡಿತ ಉಂಟಾದಾಗ ಶಿವಕುಮಾರ್ ಅವರಿಗೆ ವಿದ್ಯುತ್ ಸಮಸ್ಯೆ ಕುರಿತು ತಿಳಿಸಲೆಂದು 7.30ರಲ್ಲಿ ದೂರವಾಣಿ ಕರೆ ಮಾಡಿದ್ದಾರೆ. ಈ ಸಂದರ್ಭ ಆಕ್ರೋಶಗೊಂಡು ಸಚಿವರಿಗೆ ನಿಂದಿಸಿ ಬೆದರಿಕೆ ಹಾಕಿದ್ದರು. .
ಈ ಕುರಿತು ಹಿರಿಯ ಅಧಿಕಾರಿಗಳಿಗೆ ಇಂಧನ ಸಚಿವರು ಮಾಹಿತಿ ನೀಡಿದ್ದಾರೆ. ಅವರ ಸೂಚನೆಯಂತೆ ಸುಳ್ಯದ ಮೆಸ್ಕಾಂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ನೀಡಿದ ದೂರಿನ ಅನ್ವಯ ಸುಳ್ಯ ಪೊಲೀಸರು ಭಾನುವಾರ ರಾತ್ರಿ ಬೆಳ್ಳಾರೆಯ ಅವರ ಮನೆಯಿಂದ ರೈ ಅವರನ್ನು ಬಂಧಿಸಿದ್ದಾರೆ. ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಷರತ್ತು ಬದ್ಧ ಜಾಮೀನು ನೀಡಿದೆ.
Advertisement