ರಾಮನಗರ: ವ್ಹೀಲಿಂಗ್ ಕ್ರೇಜ್‌ಗೆ ಇಬ್ಬರು ವಿದ್ಯಾರ್ಥಿ ಬಲಿ

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವ್ಹೀಲಿಂಗ್ ಮಾಡುವಾಗ ಆಯಾ ತಪ್ಪಿ ಕೆಳಗೆ ಬಿದ್ದ ವಿದ್ಯಾರ್ಥಿಗಳ ಮೇಲೆ ಕೆಎಸ್ಆರ್ಟಿಸಿ ಬಸ್ ರಿದು ಇಬ್ಬರು ಸ್ಧಳದಲ್ಲೇ
ವ್ಹೀಲಿಂಗ್ ಕ್ರೇಜ್
ವ್ಹೀಲಿಂಗ್ ಕ್ರೇಜ್
Updated on: 
ರಾಮನಗರ: ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವ್ಹೀಲಿಂಗ್ ಮಾಡುವಾಗ ಆಯಾ ತಪ್ಪಿ ಕೆಳಗೆ ಬಿದ್ದ ವಿದ್ಯಾರ್ಥಿಗಳ ಮೇಲೆ ಕೆಎಸ್ಆರ್ಟಿಸಿ ಬಸ್ ರಿದು ಇಬ್ಬರು ಸ್ಧಳದಲ್ಲೇ ಮೃತಪಟ್ಟಿದ್ದಾರೆ. 
ರಾಮನಗರ ತಾಲೂಕಿನ ಕುಂಬಾಪುರ ಗೇಟ್ ನ ಬಳಿ ವಿದ್ಯಾರ್ಥಿಗಳಾದ ಒಡಿಸ್ಸಾ ಮೂಲದ ನವಜೋತ್, ಕೇರಳ ಮೂಲದ ಅಭಿನವ್ ವ್ಹೀಲಿಂಗ್ ಮಾಡಿಕೊಂಡು ಬೈಕ್ ಓಡಿಸುತ್ತಿದ್ದರು. ಈ ವೇಳೆ ಬೈಕ್ ನಿಯಂತ್ರಣ ತಪ್ಪಿ ವಿದ್ಯಾರ್ಥಿಗಳು ಕೆಳಗೆ ಬಿದ್ದಿದ್ದಾರೆ. ಬೈಕ್ ಹಿಂದೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಅವರ ಮೇಲೆ ಹರಿದಿದೆ. 
ಅಪಘಾತದಲ್ಲಿ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಮನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com