
ಮಂಡ್ಯ: ಸಚಿವ ಸಂಪುಟದಿಂದ ಅಂಬರೀಷ್ ಅವರನ್ನು ಕೈಬಿಟ್ಟ ಹಿನ್ನೆಲೆಯಲ್ಲಿ ಬೇಸರ ವ್ಯಕ್ತಪಡಿಸುತ್ತಿರುವ ಅಂಬರೀಷ್ ಬೆಂಬಲಿಗರು, ಮಂಡ್ಯ ಜಿಲ್ಲೆ ನೂತನ ಉಸ್ತುವಾರಿ ಸಚಿವ ಡಿ.ಕೆ. ಶಿವಕುಮಾರ್ ವಿರುದ್ಧ ಶನಿವಾರ ಪ್ರತಿಭಟನೆ ನಡೆಸಿದ್ದಾರೆ.
ನಿನ್ನೆಯಷ್ಟೇ ಡಿ.ಕೆ. ಶಿವಕುಮಾರ್ ಅವರು ಮಂಡ್ಯಕ್ಕೆ ಭೇಟಿ ನೀಡಿದ್ದರು. ಈ ವೇಳೆ ಕೆಲವು ಪ್ರದೇಶಗಳಲ್ಲಿ ಭರ್ಜರಿ ಸ್ವಾಗತ ದೊರೆತಿದ್ದರೆ, ಮತ್ತೊಂಡೆ ಅಂಬರೀಷ್ ಬೆಂಬಲಿಗರು ಡಿಕೆ. ಶಿವಕುಮಾರ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಬೆಳವಣಿಗೆಗಳು ಕಂಡುಬಂದಿದ್ದವು.
ಮಂಡ್ಯ ಮದ್ದೂರಿನ ನಿಡಘಟ್ಟ ಗ್ರಾಮದಲ್ಲಿ ಗೋ ಬ್ಯಾಕ್ ಡಿ.ಕೆ. ಶಿವಕುಮಾರ್ ಎಂದು ಅಂಬರೀಷ್ ಅವರ ಅಭಿಮಾನಿಗಳು ಘೋಷಣೆ ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸುತ್ತಿದ್ದರು. ಅಲ್ಲದೆ, ಅಂಬರೀಷ್ ಅವರ ನೂರಾರು ಭಾವಿಚಿತ್ರಗಳನ್ನು ಹಿಡಿದು ಪ್ರತಿಭಟನೆ ನಡೆಸಿದ ದೃಶ್ಯಗಳು ಕಂಡುಬಂದಿತ್ತು.
ಮಂಡ್ಯದಲ್ಲಿ ಹುಟ್ಟಿಕೊಂಡಿರುವ ಎರಡು ಬಣಗಳ ಪ್ರತಿಭಟನೆಯಿಂದಾಗಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಾಕಷ್ಟು ಸಂಚಾರ ದಟ್ಟಣೆ ಉಂಟಾಗಿತ್ತು.
ಭೇಟಿ ನಂತರ ಪ್ರತಿಕ್ರಿಯೆ ನೀಡಿರುವ ಅವರು, ಮಂಡ್ಯದಲ್ಲಿರುವ ಕಾಂಗ್ರೆಸ್ ನಲ್ಲಿ ಯಾವುದೇ ಬಣಗಳಿಲ್ಲ ಎಂದು ಹೇಳಿದ್ದಾರೆ.
ಇದೇ ವೇಳೆ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ ಸಭೆ ನಡೆಸಿದ ಬಳಿಕ ಮಾತನಾಡಿರುವ ಶಿವಕುಮಾರ್ ಅವರು, ಜನರ ಸಮಸ್ಯೆಗಳನ್ನು ಆಲಿಸಲು ಜಿಲ್ಲೆಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ)ಗಳು ತಮ್ಮ ಮನೆಯ ಮುಂದೆ ಬೋರ್ಡ್ ಗಳನ್ನು ಹಾಕಿಕೊಳ್ಳಬೇಕು. ತಡ ಮಾಡದೆ ಜನರ ಸಮಸ್ಯೆಗಳಿಗೆ ಸ್ಪಂದನೆ ನೀಡಬೇಕೆಂದು ಹೇಳಿದ್ದಾರೆ.
Advertisement