ಜುಲೈ.25 ರಿಂದ ಕೆಎಸ್ಆರ್'ಟಿಸಿ ಸಿಬ್ಬಂದಿಗಳ ಅನಿರ್ಧಿಷ್ಟಾವಧಿ ಮುಷ್ಕರ

ವೇತನ ಹೆಚ್ಚಳ ಹಾಗೂ ಇನ್ನಿತರೆ ಬೇಡಿಕೆ ಈಡೇರಿಕೆಗೆ ಅಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ ಟಿಸಿ)ದ ಸಿಬ್ಬಂದಿಗಳು ಜುಲೈ.25 ರಿಂದ ಅನಿರ್ಧಿಷ್ಟಾವಧಿ ಮುಷ್ಕರ...
ಕೆಎಸ್ಆರ್ ಟಿಸಿ (ಸಂಗ್ರಹ ಚಿತ್ರ)
ಕೆಎಸ್ಆರ್ ಟಿಸಿ (ಸಂಗ್ರಹ ಚಿತ್ರ)

ಬೆಂಗಳೂರು; ವೇತನ ಹೆಚ್ಚಳ ಹಾಗೂ ಇನ್ನಿತರೆ ಬೇಡಿಕೆ ಈಡೇರಿಕೆಗೆ ಅಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ ಟಿಸಿ)ದ ಸಿಬ್ಬಂದಿಗಳು ಜುಲೈ.25 ರಿಂದ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಕೆಎಸ್ಆರ್ ಟಿಸಿ ಸ್ಟಾಫ್ ಅ್ಯಂಡ್ ವರ್ಕರ್ಸ್ ಫೆಡರೇಷನ್ ಪ್ರಧಾನ ಕಾರ್ಯದರ್ಶಿ ಹೆಚ್.ವಿ. ಅನಂತಸುಬ್ಬರಾವ್ ಅವರು, ರಾಜ್ಯ ಸರ್ಕಾರ 4 ಸಾರಿಗೆ ನಿಗಮಗಳ ನೌಕರರ ವೇತನವನ್ನು ಅವೈಜ್ಞಾನಿಕವಾಗಿ ಪರಿಷ್ಕರಣೆ ಮಾಡಿದೆ. ನೌಕರರ ಸಂಘಟನೆಗಳ ಜತೆಗೆ ಚರ್ಚೆ ನಡೆಸದೆಯೇ ಏಕಾಏಕಿ ಶೇ.8 ರಷ್ಟು ವೇತನ ಹೆಚ್ಚಳ ಮಾಡಿದೆ ಎಂದು ಹೇಳಿದ್ದಾರೆ.

ನಿರ್ಧಾರ ಕೈಗೊಳ್ಳುವುದಕ್ಕೂ ಮುನ್ನ ಸಂಘಟನೆಗಳೊಂದಿಗೆ ಸರ್ಕಾರ ಚರ್ಚೆ ನಡೆಸಿಲ್ಲ. ಸರ್ಕಾರದ ಈ ನಿಲುವಿಗೆ ವಿರೋಧ ವ್ಯಕ್ತಪಡಿಸುತ್ತೇವೆ. ಶೀಘ್ರದಲ್ಲಿ ವೇತನವನ್ನು ಶೇ.35ಕ್ಕೆ ಏರಿಕೆ ಮಾಡದಿದ್ದರೆ, ಜುಲೈ. 25 ರಿಂದ ಅನಿರ್ಧಿಷ್ಟಾವಧಿ ಮುಷ್ಕರ ಮಾಡಲಾಗುತ್ತದೆ ಎಂದಿದ್ದಾರೆ.

ನಮ್ಮ ಮುಷ್ಕರಕ್ಕೆ ಇನ್ನಿತರೆ ಸಂಘಟನೆಗಳ ಸಹಕಾರ ಕೇಳಲಾಗಿದೆ. ಪ್ರತಿಭಟನೆಯಲ್ಲಿ 1.25 ಲಕ್ಷ ಸಿಬ್ಬಂದಿಗಳು ಪಾಲ್ಗೊಳ್ಳಲಿದ್ದಾರೆ. ಸಮಸ್ಯೆ ಕುರಿತಂತೆ ಅಧಿಕಾರಿಗಳು ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸಿದ್ದರು. ಆದರೆ, ಸಭೆಯಲ್ಲಿ ಯಾವುದೇ ಬೆಳವಣಿಗೆಗಳು ಕಂಡುಬಂದಿಲ್ಲ.

ಸಿದ್ದರಾಮಯ್ಯ ಅವರು ಕೆಎಸ್ಆರ್ ಟಿಸಿ ಸಿಬ್ಬಂದಿಗಳ ಸಮಸ್ಯೆ ಆಲಿಸುವಂತೆ ಮನವಿ ಮಾಡಿಕೊಳ್ಳುತ್ತಿದ್ದೇನೆ. ಈ ಕುರಿತಂತೆ ಈಗಾಗಲೇ ರಾಜ್ಯ ಸರ್ಕಾರಕ್ಕೆ ನೋಟಿಸ್ ಕೂಡ ಜಾರಿ ಮಾಡಲಾಗಿದೆ. ರಾಜ್ಯ ಸರ್ಕಾರದಿಂದ ಒಂದು ವೇಳೆ ಧನಾತ್ಮಕ ಪ್ರತಿಕ್ರಿಯೆ ಬರದಿದ್ದರೆ, ಜುಲೈ. 25 ರಿಂದ ಅನಿರ್ಧಾಷ್ಟಾವಧಿ ಪ್ರತಿಭಟನೆ ನಡೆಸಲಾಗುತ್ತದೆ.

ವೇತನ ಪರಿಷ್ಕರಣೆ ನಮ್ಮ ಪ್ರಮುಖ ಆಗ್ರಹವಾಗಿದೆ. ಅಲ್ಲದೆ. ವೈದ್ಯಕೀಯ ಸೌಲಭ್ಯ, ಮಹಿಳೆಯರಿಗೆ ವಿಶ್ರಾಂತಿ ಕೊಠಡಿ ಸೇರಿದಂತೆ ಇನ್ನು 41 ಆಗ್ರಹಗಳಿವೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com