ರಾಜೀವ್ ಗಾಂಧಿ ವಿವಿ ಕಾರ್ಯವೈಖರಿಯನ್ನು ತನಿಖೆ ನಡೆಸಿ: ಎಸಿಬಿಗೆ 'ಹೈ' ಸೂಚನೆ

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ವಿರುದ್ಧ ಆರೋಪಗಳು ಕೇಳಿಬರುತ್ತಿದ್ದು, ವಿವಿ ಕಾರ್ಯವೈಖರಿ ಕುರಿತು ತನಿಖೆ ನಡೆಸುವಂತೆ ಕಲಬುರ್ಗಿ ಹೈಕೋರ್ಟ್ ನ್ಯಾಯಪೀಠ ಭ್ರಷ್ಟಾಚಾರ...
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ (ಸಂಗ್ರಹ ಚಿತ್ರ)
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ (ಸಂಗ್ರಹ ಚಿತ್ರ)

ಕಲಬುರ್ಗಿ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ವಿರುದ್ಧ ಆರೋಪಗಳು ಕೇಳಿಬರುತ್ತಿದ್ದು, ವಿವಿ ಕಾರ್ಯವೈಖರಿ ಕುರಿತು ತನಿಖೆ ನಡೆಸುವಂತೆ ಕಲಬುರ್ಗಿ ಹೈಕೋರ್ಟ್ ನ್ಯಾಯಪೀಠ ಭ್ರಷ್ಟಾಚಾರ ನಿಗ್ರಹ ದಳಕ್ಕೆ ಮಂಗಳವಾರ ಸೂಚನೆ ನೀಡಿದೆ.

ಸ್ಪರ್ಧಾತ್ಮಕ ಪರೀಕ್ಷೆ ಬರೆಯದ ವಿದ್ಯಾರ್ಥಿಗಳನ್ನು ವಿವಿಯಲ್ಲಿ ದಾಖಲು ಮಾಡಿಕೊಳ್ಳಲಾಗಿದೆ ಎಂಬ ಆರೋಪಗಳು ಕೇಳಿಬಂದಿದೆ. ಈ ವಿಚಾರದಲ್ಲಿ ವಿಶ್ವವಿದ್ಯಾಲಯದ ಪ್ರಾಂಶುಪಾಲರ ಕೈವಾಡವಿದೆ ಎಂದು ಹೇಳಲಾಗುತ್ತಿದೆ. ದಾಖಲಾತಿಯಲ್ಲಿ ಅಧಿಕಾರಿಗಳು ಕಾನೂನನ್ನು ಉಲ್ಲಂಘನೆ ಮಾಡಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ಹೀಗಾಗಿ ವಿಶ್ವವಿದ್ಯಾಲಯದ ಕಾರ್ಯವೈಖರಿ ಕುರಿತಂತೆ ಎಸಿಬಿ ತನಿಖೆ ನಡೆಸಬೇಕಿದೆ ಎಂದು ಪೀಠ ಹೇಳಿದೆ.

ವಿಶ್ವವಿದ್ಯಾಲಯ ಹಾಗೂ ದಂತ ಕಾಲೇಜಿನ ನಡುವೆ ಆಗಿರುವ ಒಪ್ಪಂದಗಳು ತನಿಖೆಯಿಂದ ಹೊರಬರಬೇಕಿದೆ. ತನಿಖೆಯಲ್ಲಿ ಒಂದು ವೇಳೆ ಅಕ್ರಮಗಳು ಕಂಡುಬಂದಿದ್ದೇ ಆದರೆ, ಕಾನೂನಾತ್ಮಕವಾಗಿ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಬೇಕು. ತನಿಖೆ ವರದಿಯನ್ನು ಪ್ರತೀ ತಿಂಗಳು ಎಸಿಬಿ ನ್ಯಾಯಾಲಯಕ್ಕೆ ನೀಡಬೇಕು. ಮೊದಲ ವರದಿಯನ್ನು ಜುಲೈ.22ರ ಒಳಗಾಗಿ ನೀಡಬೇಕೆಂದು ನ್ಯಾಯಮೂರ್ತಿ ಚೌಹಾಣ್ ಅವರು ಸೂಚನೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com