ರಂಜಾನ್ ಪ್ರಾರ್ಥನೆ ಬಳಿಕ ಈದ್ಗಾ ಮೈದಾನದಲ್ಲಿ ಕೈ-ಜೆಡಿಎಸ್ ಕಾರ್ಯಕರ್ತರ ಮಾರಾಮಾರಿ

ರಂಜಾನ್ ಸಾಮೂಹಿಕ ಪ್ರಾರ್ಥನೆ ನಡೆದ ಬಳಿಕ ಜೆಡಿಎಸ್ ಮತ್ತು ಕಾಂಗ್ರೆಸ್ ಬೆಂಬಲಿಗರ ನಡುವೆ ಮಾರಾಮಾರಿ ನಡೆದಿರುವ ಘಟನೆ ಕೆಆರ್ ಪೇಟೆಯ ಈದ್ಗಾ...
ಕಾರ್ಯಕರ್ತರ ಮಾರಾಮಾರಿ
ಕಾರ್ಯಕರ್ತರ ಮಾರಾಮಾರಿ
Updated on

ಮಂಡ್ಯ: ರಂಜಾನ್ ಸಾಮೂಹಿಕ ಪ್ರಾರ್ಥನೆ ನಡೆದ ಬಳಿಕ ಜೆಡಿಎಸ್ ಮತ್ತು ಕಾಂಗ್ರೆಸ್ ಬೆಂಬಲಿಗರ ನಡುವೆ ಮಾರಾಮಾರಿ ನಡೆದಿರುವ ಘಟನೆ ಕೆಆರ್ ಪೇಟೆಯ ಈದ್ಗಾ ಮೈದಾನದಲ್ಲಿ ನಡೆದಿದೆ.

ಕೆಆರ್ ಪೇಟೆ ಜೆಡಿಎಸ್ ಶಾಸಕ ಕೆ.ಸಿ ನಾರಾಯಣಗೌಡ ಅವರಿಗೆ ಮಾತನಾಡಲು ಮೈಕ್ ನೀಡಿಲ್ಲ ಎಂಬ ಕಾರಣಕ್ಕೆ ಜೆಡಿಎಸ್ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ವೇಳೆ ಮಸೀದಿ ಬಳಿ ಇದ್ದ ಕಾಂಗ್ರೆಸ್ ಬೆಂಬಲಿಗರು ಜೆಡಿಎಸ್ ಮುಖಂಡ ನವೀದ್ ಮತ್ತು ಅಶ್ರಫ್ ಪಾಶಾರನ್ನು ಹಿಗ್ಗಾ ಮುಗ್ಗಾ ಥಳಿಸಿದ್ದು, ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಘರ್ಷಣೆಯಲ್ಲಿ 10ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು ಸ್ಥಳಕ್ಕೆ ಬಂದ ಪೊಲೀಸರು ಜನರನ್ನು ಚದುರಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಘಟನಾ ಸ್ಥಳದಲ್ಲಿ ಭಾರೀ ಬಂದೋಬಸ್ತ್ ಕೈಗೊಳ್ಳಲಾಗಿದ್ದು ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com