ಎಂಕೆ ಗಣಪತಿ ಅಂತ್ಯಸಂಸ್ಕಾರ
ಎಂಕೆ ಗಣಪತಿ ಅಂತ್ಯಸಂಸ್ಕಾರ

ಡಿವೈಎಸ್ಪಿ ಎಂಕೆ ಗಣಪತಿ ಪಂಚಭೂತಗಳಲ್ಲಿ ಲೀನ

ಹಿರಿಯ ಅಧಿಕಾರಿಗಳು ಹಾಗೂ ಪ್ರಭಾವಿ ರಾಜಕಾರಣಿಯೊಬ್ಬರು ತಮಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ನಿನ್ನೆ ಸಂಜೆ ಆತ್ಮಹತ್ಯೆಗೆ ಶರಣಾಗಿದ್ದ...
ಮಡಿಕೇರಿ: ಹಿರಿಯ ಅಧಿಕಾರಿಗಳು ಹಾಗೂ ಪ್ರಭಾವಿ ರಾಜಕಾರಣಿಯೊಬ್ಬರು ತಮಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ನಿನ್ನೆ ಸಂಜೆ ಆತ್ಮಹತ್ಯೆಗೆ ಶರಣಾಗಿದ್ದ ಮಂಗಳೂರು ಐಜಿಪಿ ಕಚೇರಿಯ ಡಿವೈಎಸ್ಪಿ ಎಂಕೆ ಗಣಪತಿ ಅವರು ಶುಕ್ರವಾರ ಪಂಚಭೂತಗಳಲ್ಲಿ ಲೀನವಾಗಿದ್ದಾರೆ.
ಇಂದು ಮಧ್ಯಾಹ್ನ ಮಡಿಕೇರಿಯ ಸೋಮವಾರಪೇಟೆ ತಾಲೂಕಿನ ರಂಗನಸಮುದ್ರ ಗ್ರಾಮದ ತೋಟದ ಮನೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಗಣಪತಿ ಅವರ ಅಂತ್ಯಸಂಸ್ಕಾರ ನಡೆಯಿತು.
ಕೊಡವ ಸಂಪ್ರದಾಯದಂತೆ ಅಂತಿಮ ವಿಧಿ, ವಿಧಾನ ನೆರವೇರಿಸಲಾಯಿತು. ಗಣಪತಿ ಹಿರಿಯ ಪುತ್ರ ನೇಹಲ್ ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಅಂತ್ಯಕ್ರಿಯೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು, ಕೊಡಗು ಜಿಲ್ಲಾಧಿಕಾರಿ, ಗಣಪತಿ ತಂದೆ ಕುಶಾಲಪ್ಪ, ಸಹೋದರ, ಪತ್ನಿ, ಪುತ್ರರು ಹಾಗೂ ಸಂಬಂಧಿಗಳು ಪಾಲ್ಗೊಂಡಿದ್ದರು.
ಎಂಕೆ ಗಣಪತಿ ಅವರು ನಿನ್ನೆ ಮಡಿಕೇರಿ ವಿನಾಯಕ ಲಾಡ್ಜ್ ನಲ್ಲಿ ನೇಣಿಗೆ ಶರಣಾಗಿದ್ದರು. ನೇಣಿಗೆ ಶರಣಾಗುವ ಮುನ್ನ ನನ್ನ ಸಾವಿಗೆ ಹಿಂದಿನ ಗೃಹಸಚಿವ ಕೆ.ಜೆ. ಜಾರ್ಜ್, ಐಜಿಪಿ ಪ್ರಣವ್ ಮೊಹಂತಿ, ಎಡಿಜಿಪಿ ಎಎಂ ಪ್ರಸಾದ್ ಕಾರಣ ಎಂದು ಆರೋಪಿಸಿದ್ದರು.
ಗಣಪತಿ ಅವರು ನೀಡಿರುವ ಹೇಳಿಕೆ ಇದೀಗ ರಾಜಕೀಯ ವಲಯ ಹಾಗೂ ಪೊಲೀಸ್ ಇಲಾಖೆಯಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿದೆ.

Related Stories

No stories found.

Advertisement

X
Kannada Prabha
www.kannadaprabha.com