
ಕಲಬುರಗಿ: ಮೆದುಳು ಕ್ಯಾನ್ಸರ್ನಿಂದ ಬಳಲುತ್ತಿದ್ದ ಹುತಾತ್ಮ ಪಿಎಸ್ ಐ ಮಲ್ಲಿಕಾರ್ಜುನ ಬಂಡೆ ಅವರ ಪತ್ನಿ ಮಲ್ಲಮ್ಮ ಶನಿವಾರ ಬೆಳಗಿನ ಜಾವ ಮೃತಪಟ್ಟಿದ್ದಾರೆ.
ಹಲವು ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಲ್ಲಮ್ಮ (40) ಶನಿವಾರ ಬೆಳಗ್ಗೆ 5 ಗಂಟೆ ಸುಮಾರಿಗೆ ತಮ್ಮ ಸಹೋದರಿಯ ಮನೆಯಲ್ಲಿ ಮೃತಪಟ್ಟಿದ್ದಾರೆ. ಮಲ್ಲಮ್ಮ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಕಲಬುರಗಿಯಲ್ಲಿ 2014ರಲ್ಲಿ ಶಾರ್ಪ್ ಶೂಟರ್ ಮುನ್ನಾನೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಗುಂಡು ತಗುಲಿ ಮಲ್ಲಿಕಾರ್ಜುನ ಬಂಡೆ ಮೃತಪಟ್ಟಿದ್ದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಮೇಲ್ವಿಚಾರಕಿಯಾಗಿ ಮಲ್ಲಮ್ಮ ಅವರು ಕೆಲಸ ಮಾಡುತ್ತಿದ್ದರು. ಮಲ್ಲಿಕಾರ್ಜುನ ಬಂಡೆ, ಮಲ್ಲಮ್ಮ ದಂಪತಿಗೆ ಶಿವಾನಿ ಮತ್ತು ಸಾಯಿ ಎಂಬ ಇಬ್ಬರು ಮಕ್ಕಳಿದ್ದು, ತಂದೆ-ತಾಯಿಯನ್ನು ಕಳೆದುಕೊಂಡು ಅನಾಥರಾಗಿದ್ದಾರೆ .ಇಂದು ಸಂಜೆ ಮಲ್ಲಮ್ಮ ಅವರ ಅಂತ್ಯಕ್ರಿಯೆ ನಡೆಯಲಿದೆ.
Advertisement