ಆಟದ ಮೈದಾನದಲ್ಲಿ ಸ್ಟೇಡಿಯಂ ನಿರ್ಮಾಣ ವಿರೋಧಿಸಿ ಬಿಬಿಎಂಪಿ ವಿರುದ್ಧ ಪ್ರತಿಭಟನೆ
ಬೆಂಗಳೂರು: ಆಟದ ಮೈದಾಲದಲ್ಲಿ ಬಿಎಂಆರ್ ಸಿಎಲ್ ಕಚೇರಿ ಮತ್ತು ಒಳಾಂಗಣ ಕ್ರೀಡಾಂಗಣ ನಿರ್ಮಿಸಬೇಕು ಎನ್ನುವ ಬಿಬಿಎಂಪಿ ಪ್ರಸ್ತಾಪ ವಿರೋಧಿಸಿ ಇಂದಿರಾನಗರ ನಿವಾಸಿಗಳು ಪ್ರತಿಭಟನೆ ನಡೆಸಿದರು.
ಶಾಲಾ ಮಕ್ಕಳು ಹಾಗೂ ಸ್ಥಳೀಯರು, ನಿವಾಸಿಗಳ ಸಂಘದ ಸದಸ್ಯರು, ಇಂದಿರಾನಗರದ 2 ನೇ ಹಂತದ 4ನೇ ಮುಖ್ಯರಸ್ತೆಯಲ್ಲಿರುವ ಆಟದ ಮೈದಾನದಲ್ಲಿ ಸೇರಿ ಪ್ರತಿಭಟನೆ ನಡೆಸಿದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಬಿಬಿಎಂಪಿ ಆಯುಕ್ತ ಎನ್ ಮಂಜುನಾಥ್ ಪ್ರಸಾದ್, ಬೆಂಗಳೂರು ನಗರಾಭಿವೃದ್ಧಿ ಸಚಿವ ಜಾರ್ಜ್ ಅವರ ಜೊತೆ ಚರ್ಚಿಸಿ ಯೋಜನೆ ಕೈ ಬಿಡುವಂತೆ ಮನವಿ ಮಾಡುವುದಾಗಿ ಹೇಳಿದ್ದಾರೆ.
ಇತ್ತೀಚೆಗೆ ನಾವು ಅಲ್ಲಿಗೆ ಭೇಟಿ ನೀಡಿದಾಗ ಮಕ್ಕಳು ಅಲ್ಲಿ ಆಟವಾಡುತ್ತಿರುವುದನ್ನು ನೋಡಿದೆವು. ಹಲವು ಮಕ್ಕಳು ಬ್ಯಾಸ್ಕೆಟ್ ಬಾಲ್, ಕ್ರಿಕೆಟ್ ಆಡುತ್ತಿದ್ದರು. ಆಟದ ಮೈದಾನವನ್ನು ಸ್ಟೇಡಿಯಂ ಆಗಿ ಪರಿವರ್ತಿಸುವುದು ಉತ್ತಮ ವಿಚಾರ, ಆದರೆ ಸ್ಥಳೀಯರ ಇಷ್ಟಕ್ಕೆ ವಿರೋಧವಾಗಿ ತಾವು ಯಾವುದೇ ಕೆಲಸ ಮಾಡುವುದಿಲ್ಲ ಎಂದು ಆಯುಕ್ತರ ಸ್ಪಷ್ಟ ಪಡಿಸಿದ್ದಾರೆ.
2015 ರ ಜುಲೈ ನಲ್ಲಿ ಈ ಆಟದ ಮೈದಾನದಲ್ಲಿ ಸ್ಟೇಡಿಯಂ ನಿರ್ಮಾಣ ಮಾಡಲು ಬಿಎಂಆರ್ ಸಿಎಲ್ ಸರ್ಕಾರದಿಂದ ಅನುಮತಿ ಕೋರಿತ್ತು, ಆದರೆ 2016ರ ಫೆಬ್ರವರಿಯಲ್ಲಿ ಸರ್ಕಾರ ಅನುಮತಿ ನಿರಾಕರಿಸಿತ್ತು. ಆದರೆ ಈಗ ಬಿಬಿಎಂಪಿ ಮತ್ತೆ ಅನುಮತಿ ನೀಡುವಂತೆ ಸರ್ಕಾರವನ್ನು ಒತ್ತಾಯಿಸುತ್ತಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ