ನೈಟ್'ಪಾರ್ಟಿಗಳಿಂದ ದೂರ ಉಳಿಯುವಂತೆ ವಿದೇಶಿಯರಿಗೆ ಪೊಲೀಸರ ಮನವಿ

ಕ್ಷುಲ್ಲಕ ಕಾರಣಕ್ಕೆ ಹೊಡೆದಾಡಿ ಸಿಲಿಕಾನ್ ಸಿಟಿಯಲ್ಲಿ ಅಶಾಂತಿ ಸೃಷ್ಟಿಸಿದ್ದ ಉಗಾಂಡ ಪ್ರಜೆಗಳ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಪೊಲೀಸರು ಇದೀಗ ನಗರದಲ್ಲಿ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮೈಸೂರು: ಕ್ಷುಲ್ಲಕ ಕಾರಣಕ್ಕೆ ಹೊಡೆದಾಡಿ ಸಿಲಿಕಾನ್ ಸಿಟಿಯಲ್ಲಿ ಅಶಾಂತಿ ಸೃಷ್ಟಿಸಿದ್ದ ಉಗಾಂಡ ಪ್ರಜೆಗಳ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಪೊಲೀಸರು ಇದೀಗ ನಗರದಲ್ಲಿ ನೆಲೆಸಿರುವ ವಿದೇಶಿಯರು ನೈಟ್'ಪಾರ್ಟಿಗಳಿಂದ ದೂರ ಉಳಿಯುವಂತೆ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.

ಪ್ರಕರಣ ಹಿನ್ನೆಲೆಯಲ್ಲಿ ಪೊಲೀಸರು ಇತ್ತೀಚೆಗಷ್ಟೇ ಸಭೆಯೊಂದನ್ನು ನಡೆಸಿದ್ದರು. ಸಭೆಯಲ್ಲಿ ವಿದೇಶಿ ವಿದ್ಯಾರ್ಥಿಗಳಿಗೆ ಕೆಲ ಎಚ್ಚರಿಕೆ ಹಾಗೂ ಸೂಚನೆಗಳನ್ನು ನೀಡಿದ್ದಾರೆಂದು ಹೇಳಲಾಗುತ್ತಿದೆ

ನಗರದಲ್ಲಿ 67 ದೇಶಗಳ ಮೂಲದ 4000 ವಿದೇಶಿ ವಿದ್ಯಾರ್ಥಿಗಳು ವಿವಿಧ ವಿಶ್ವವಿದ್ಯಾಲಯ ಹಾಗೂ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ನಗರದಲ್ಲಿ ನೆಲೆಸುವ ವಿದೇಶಿ ವಿದ್ಯಾರ್ಥಿಗಳು ಸ್ಥಳೀಯ ನೀತಿ, ನಿಯಮ ಹಾಗೂ ಸಂಸ್ಕೃತಿಯನ್ನು ಪಾಲಿಸಬೇಕು. ಲೇಟ್ ನೈಟ್ ಪಾರ್ಟಿಗಳಿಗೆ ಹೋಗಿ ಬಂದು ಮಧ್ಯರಾತ್ರಿ ವೇಳೆ ಗಲಾಟೆ ಮಾಡುವುದು ನಗರದಲ್ಲಿ ಅಶಾಂತಿಯನ್ನುಂಟು ಮಾಡುತ್ತದೆ. ಸ್ಥಳೀಯ ಸಂಸ್ಕೃತಿಯನ್ನು ವಿದೇಶಿಯರು ಗೌರವಿಸಬೇಕೆಂದು ಹೇಳಿದ್ದಾರೆ.

ಅಲ್ಲದೆ, ಚಾಲನಾ ಪರವಾನಗಿ ಇಲ್ಲದೆಯೇ ವಾಹನಗಳನ್ನು ಚಾಲನೆ ಮಾಡದಂತೆಯೂ ಸೂಚನೆ ನೀಡಿದ್ದು, ವಾಹನ ಚಾಲನೆ ಮಾಡುವಾಗ ಸಂಬಂಧಪಟ್ಟ ದಾಖಲೆಗಳನ್ನು ತಮ್ಮ ಬಳಿ ಇರಿಸಿಕೊಳ್ಳುವಂತೆಯೂ ಸೂಚನೆ ನೀಡಿದ್ದಾರೆಂದು ಹೇಳಲಾಗುತ್ತಿದೆ.

ಜೆಎಸ್ಎಸ್ ಕಾಲೇಜಿನ ಕಾನೂನು ವಿದ್ಯಾರ್ಥಿ ಹಾಗೂ ಮೈಸೂರಿನ ಅಂತಾರಾಷ್ಟ್ರೀಯ ವಿದ್ಯಾರ್ಥಿಗಳ ಸಂಘ ಉಪಾಧ್ಯಕ್ಷ ತಿನಾಶೆ ಮಾತನಾಡಿ, ವಿದೇಶಿ ವಿದ್ಯಾರ್ಥಿಗಳೊಂದಿಗೆ ಪೊಲೀಸರು ಮಾತುಕತೆ ನಡೆಸಿದ್ದಾರೆ. ಅಲ್ಲದೆ, ಸ್ಥಳೀಯ ನೀತಿ ಹಾಗೂ ನಿಯಮಗಳನ್ನು ಗೌರವಿಸಿ ಪಾಲಿಸುವಂತೆಯೂ ಸೂಚನೆ ನೀಡಿದ್ದಾರೆ. ತಮ್ಮ ತಮ್ಮ ನಿಯಂತ್ರಣದಲ್ಲಿ ವರ್ತಿಸುವಂತೆಯೂ ವಿದ್ಯಾರ್ಥಿಗಳಿಗೆ ತಿಳಿಸಲಾಗಿದೆ. ಸಭೆಯ ವೇಳೆ ವಿದೇಶಿ ವಿದ್ಯಾರ್ಥಿಗಳಿಗೆ ಹೆಚ್ಚಿನ ಭದ್ರತೆ ನೀಡುವಂತೆ ಅಧಿಕಾರಿಗಳ ಬಳಿ ಮನವಿ ಮಾಡಲಾಗಿದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com