ಗಣಪತಿ ಆತ್ಮಹತ್ಯೆ ಪ್ರಕರಣ: ಜಾರ್ಜ್ ರಾಜಿನಾಮೆಗೆ ಒತ್ತಾಯಿಸಿ ಕೊಡಗು ಜಿಲ್ಲೆ ಬಂದ್

ಡಿವೈಎಸ್ ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಸಚಿವ ಕೆಜೆ ಜಾರ್ಜ್ ರಾಜಿನಾಮೆಗೆ ಒತ್ತಾಯಿಸಿ ವಿವಿಧ ಸಂಘಟನೆಗಳು ಕೊಡಗು ಜಿಲ್ಲೆ ಬಂದ್ ನಡೆಸುತ್ತಿವೆ.
ಕೆಜೆ ಜಾರ್ಜ್
ಕೆಜೆ ಜಾರ್ಜ್

ಕೊಡಗು: ಡಿವೈಎಸ್ ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಸಚಿವ ಕೆಜೆ ಜಾರ್ಜ್ ರಾಜಿನಾಮೆಗೆ ಒತ್ತಾಯಿಸಿ ವಿವಿಧ ಸಂಘಟನೆಗಳು ಕೊಡಗು ಜಿಲ್ಲೆ ಬಂದ್ ನಡೆಸುತ್ತಿವೆ.

ಬಂದ್ ಗೆ ಕರೆ ನೀಡಿರುವ ಸಂಘಟನೆಗಳು, ಸ್ಥಳೀಯರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಮೈಸೂರು- ವಿರಾಜಪೇಟೆಗೆ ಸಂಪರ್ಕ ಕಲ್ಪಿಸುವ ಬಿಟ್ಟಂಗಾಲ ಬಳಿಯ ರಸ್ತೆಯಲ್ಲಿ ಮರ ಕಡಿದು ಹಾಕಿ ವಾಹನ ಸಂಚಾರವನ್ನು ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲಾಗಿದೆ. ಇನ್ನು ಕೊಡಗು ಜಿಲ್ಲೆಯ ಮೂರು ಜಿಲ್ಲಾ ಕೇಂದ್ರಗಳಲ್ಲಿ ದ್ವಿತೀಯ ಪಿ ಯು ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ಕೊಡಗು ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಮುನ್ನೆಚ್ಚರಿಕಾ ಕ್ರಮವಾಗಿ 1,200 ಪೊಲೀಸ್ ಸಿಬ್ಬಂದಿಗಳು, 150 ಪೊಲೀಸ್ ಅಧಿಕಾರಿಗಳು, 25 ಕೆಎಸ್ ಆರ್ ಪಿ ತುಕಡಿ,  3 ಗಸ್ತು ವಾಹನಗಳನ್ನು ನಿಯೋಜಿಸಲಾಗಿದ್ದು ಜಿಲ್ಲೆಯಾದ್ಯಂತ 20 ವಿಡಿಯೋ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಪಿಯು ಪೂರಕ ಪರೀಕ್ಷೆ ನಡೆಯಲಿರುವ ಹಿನ್ನೆಲೆಯಲ್ಲಿ ಪರೀಕ್ಷಾರ್ಥಿಗಳಿಗೆ ತೊಂದರೆ ಮಾಡದಂತೆ ಪ್ರತಿಭಟನಾ ನಿರತರಿಗೆ ಜಿಲ್ಲಾಡಳಿತ ಮನವಿ ಮಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X

Advertisement

X
Kannada Prabha
www.kannadaprabha.com