ಗಣಪತಿ ಆತ್ಮಹತ್ಯೆ ಪ್ರಕರಣ: ನ್ಯಾಯಾಂಗ, ಸಿಐಡಿಯಿಂದ ಪ್ರತ್ಯೇಕ ತನಿಖೆ

ಮಂಗಳೂರು ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣವನ್ನು ನ್ಯಾಯಾಂಗ ಮತ್ತು ಸಿಐಡಿ ಅಧಿಕಾರಿಗಳು ಪ್ರತ್ಯೇಕವಾಗಿ ತನಿಖೆ ನಡೆಸಲಿದ್ದಾರೆಂದು ಸರ್ಕಾರ ಸ್ಪಷ್ಟನೆ ನೀಡಿದೆ...
ಡಿವೈಎಸ್ಪಿ ಗಣಪತಿ
ಡಿವೈಎಸ್ಪಿ ಗಣಪತಿ

ಬೆಂಗಳೂರು: ಮಂಗಳೂರು ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣವನ್ನು ನ್ಯಾಯಾಂಗ ಮತ್ತು ಸಿಐಡಿ ಅಧಿಕಾರಿಗಳು ಪ್ರತ್ಯೇಕವಾಗಿ ತನಿಖೆ ನಡೆಸಲಿದ್ದಾರೆಂದು ಸರ್ಕಾರ ಸ್ಪಷ್ಟನೆ ನೀಡಿದೆ.

ಪ್ರತಿಪಕ್ಷಗಳ ಒತ್ತಡಕ್ಕೆ ಮಣಿದಿದ್ದ ರಾಜ್ಯ ಸರ್ಕಾರ ಇತ್ತೀಚೆಗಷ್ಟೇ ಆತ್ಮಹತ್ಯೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಿತ್ತು. ಸರ್ಕಾರದ ಈ ನಿರ್ಧಾರ ಕೆಲ ಗೊಂದಲಗಳನ್ನು ಸೃಷ್ಟಿಸಿತ್ತು. ಈಗಾಗಲೇ ಪ್ರಕರಣವನ್ನು ಸಿಐಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಸಿಐಡಿ ಅಧಿಕಾರಿಗಳು ತನಿಖೆ ಮುಂದುವರೆಸುತ್ತಾರೆಯೇ ಅಥವಾ ತನಿಖೆಯನ್ನು ನಿಲ್ಲುಸುವರೋ ಎಂಬ ಅನುಮಾನಗಳು ಮೂಡಿದ್ದವು.

ಈ ಹಿನ್ನೆಲೆಯಲ್ಲಿ ಅನುಮಾನಗಳಿಗೆ ತೆರೆ ಎಳೆದಿರುವ ರಾಜ್ಯ ಸರ್ಕಾರ ನ್ಯಾಯಾಂಗ ಮತ್ತು ಸಿಐಡಿ ಅಧಿಕಾರಿಗಳು ಪ್ರತ್ಯೇಕವಾಗಿ, ಸಮನಾಂತರವಾಗಿ ತನಿಖೆ ನಡೆಸಲಿದೆ ಎಂದು ಹೇಳಿದೆ.

ಅಪರಾಧ ಪ್ರಕ್ರಿಯೆಯಡಿಯಲ್ಲಿ ಗಣಪತಿಯವರ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ವಿಚಾರಣಾ ಆಯೋಗ ಕಾಯ್ದೆ-1952ರ ಅನುಸಾರ ಎಲ್ಲಾ ವಿಚಾರಣಾ ಆಯೋಗಗಳು ನಿರ್ದಿಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸತ್ಯಾಂಶ ಏನೆಂಬುದನ್ನು ಪತ್ತೆ ಹಚ್ಚುವ ಕೆಲಸವನ್ನು ಮಾಡುತ್ತದೆ.

ಗಣಪತಿಯವರ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಿದ್ದು, ನಾಗರೀಕ ನ್ಯಾಯಾಲಯದ ತನಿಖಾ ಆಯೋಗಕ್ಕೆ ಅಧಿಕಾರವನ್ನು ನೀಡಲಿದೆ. ಅಧಿಕಾರವನ್ನಿಡಿದು ಆಯೋಗ ತನಿಖೆ ನಡೆಸಲು ವ್ಯಕ್ತಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡುವುದು, ದಾಖಲಾತಿಗಳನ್ನು ಪರಿಶೀಲಿಸುವುದನ್ನು ಮಾಡುತ್ತದೆ. ತನಿಖಾಧಿಕಾರಿಗಳಿಂದಲೂ ದಾಖಲಾತಿಗಳನ್ನು ಪಡೆಯುವ ಅಧಿಕಾರ ನ್ಯಾಯಾಂಗ ತನಿಖಾಧಿಕಾರಿಗಳಿರುತ್ತದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com