ಕಳಸಾ ಬಂಡೂರಿ ಹೋರಾಟಕ್ಕೆ 1ವರ್ಷ: ಗದಗ, ಬೆಳಗಾವಿ, ಧಾರವಾಡ, ಬಾಗಲಕೋಟೆ ಬಂದ್

ಕಳಸಾ ಬಂಡೂರಿ ಹಾಗೂ ಮಹದಾಯಿ ನದಿ ಜೋಡಣೆ ಅನುಷ್ಠಾನಕ್ಕೆ ಆಗ್ರಹಿಸಿ ನಡೆಯುತ್ತಿರುವ ಹೋರಾಟಕ್ಕೆ ಒಂದು ವರ್ಷ ತುಂಬಿರುವ ಹಿನ್ನೆಲೆಯಲ್ಲಿ ..
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಧಾರವಾಡ: ಕಳಸಾ ಬಂಡೂರಿ ಹಾಗೂ ಮಹದಾಯಿ ನದಿ ಜೋಡಣೆ ಅನುಷ್ಠಾನಕ್ಕೆ ಆಗ್ರಹಿಸಿ ನಡೆಯುತ್ತಿರುವ ಹೋರಾಟಕ್ಕೆ ಒಂದು ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಹೋರಾಟಗಾರರು ಇಂದು ಧಾರವಾಡ, ಬೆಳಗಾವಿ, ಗದಗ ಮತ್ತು ಬಾಗಲಕೋಟೆ ಬಂದ್​ಗೆ ಕರೆ ನೀಡಿದ್ದಾರೆ.

ಒಂದು ವರ್ಷ ಕಳೆದರೂ ರಾಜಕೀಯ ಇಚ್ಛಾಶಕ್ತಿಯ ಕೊರತೆಯಿಂದಲೇ ಹೋರಾಟದ ಮೂಲ ಉದ್ದೇಶ ಈಡೇರಿಲ್ಲ ಎನ್ನುವುದು ಮಹಾದಾಯಿ ಹೋರಾಟ ಸಮನ್ವಯ ಸಮಿತಿಯ ಅಭಿಮತ. ರಾಜಕೀಯ ಜಡತ್ವಕ್ಕೆ ಬಿಸಿ ಮುಟ್ಟಿಸಲು ಶನಿವಾರ ‘ಕರಾಳ ದಿನ’ ಆಚರಿಸಲು ರೈತರು ನಿರ್ಧರಿಸಿದ್ದಾರೆ.

ಧಾರವಾಡದಲ್ಲಿ ಬಂದ್​ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ರೈತರು ಮತ್ತು ವಿವಿಧ ಸಂಘಟನೆಗಳ ಹೋರಾಟಗಾರರು ನಗರದ ಜ್ಯುಬ್ಲಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಹೋರಾಟಗಾರರು ಟೈರ್​ಗೆ ಬೆಂಕಿ ಹಚ್ಚಿ, ಕಪ್ಪು ಬಾವುಡ ಪ್ರದರ್ಶಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೊಷಣೆ ಕೂಗಿ ತಮ್ಮ ಆಕ್ರೋಶ ಹೊರಕಾಕುತ್ತಿದ್ದಾರೆ.

ಹುಬ್ಬಳ್ಳಿಯಲ್ಲೂ ಬಂದ್​ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ರೈತ ಸೇನಾ ರಾಜ್ಯಧ್ಯಕ್ಷ ವೀರೇಶ ಸೊಬರದಮಠ ನೇತೃತ್ವದಲ್ಲಿ ರೈತರು ಹಳೇ ಮತ್ತು ಹೊಸ ಬಸ್ ನಿಲ್ದಾಣಕ್ಕೆ ಲಗ್ಗೆ ಹಾಕಿದ್ದು, ರೈಲ್ವೆ ನಿಲ್ದಾಣಕ್ಕೂ ತೆರಳಿ ರೈಲು ತಡೆಯಲು ಮುಂದಾಗಿದ್ದಾರೆ.

ಬೆಳಗಾವಿಯಲ್ಲೂ ಬಂದ್​ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ವಿವಿಧ ರೈತರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಬಸ್ ನಿಲ್ದಾಣದ ಬಳಿ ಟೈರ್​ಗೆ ಬೆಂಕಿ ಹಚ್ಚಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com