ಬೆಂಗಳೂರಿನಲ್ಲಿ ಕಾಶ್ಮಿರ ಪ್ರತ್ಯೇಕತಾವಾದಿಗಳ ಪರವಾಗಿ ನಡೆಯಬೇಕಿದ್ದ ಪ್ರತಿಭಟನೆಗೆ ಅನುಮತಿ ನಿರಾಕರಣೆ

ಕಾಶ್ಮೀರ ಪ್ರತ್ಯೇಕತಾವಾದಿಗಳಿಗೆ ಬೆಂಬಲ ಸೂಚಿಸಿ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಗೆ ನಗರ ಪೊಲೀಸ್ ಆಯುಕ್ತರು ಅನುಮತಿ ನಿರಾಕರಿಸಿದ್ದಾರೆ.
ಬೆಂಗಳೂರಿನಲ್ಲಿ ಕಾಶ್ಮಿರ ಪ್ರತ್ಯೇಕತಾವಾದಿಗಳ ಪರವಾಗಿ ನಡೆಯಬೇಕಿದ್ದ ಪ್ರತಿಭಟನೆಗೆ ಅನುಮತಿ ನಿರಾಕರಣೆ
ಬೆಂಗಳೂರು: ಕಾಶ್ಮೀರ ಪ್ರತ್ಯೇಕತಾವಾದಿಗಳಿಗೆ ಬೆಂಬಲ ಸೂಚಿಸಿ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಗೆ ನಗರ ಪೊಲೀಸ್ ಆಯುಕ್ತರು ಅನುಮತಿ ನಿರಾಕರಿಸಿದ್ದಾರೆ. 
ಪ್ರತ್ಯೇಕತಾವಾದಿಗಳಿಗೆ ಬೆಂಬಲ ಸೂಚಿಸಿ ನಡೆಸುವ ಪ್ರತಿಭಟನೆ ದೇಶದ ಸಾರ್ವಭೌಮತೆಗೆ ಧಕ್ಕೆ ಉಂಟುಮಾಡುವುದಾಗಿದ್ದು, ದೇಶವಿರೋಧಿಯಾಗಿರುವುದರಿಂದ ಅನುಮತಿ ನೀಡಬಾರದು ಎಂದು ಉತ್ತಿಷ್ಠ ಭಾರತ ಸಂಘಟನೆ ಆಯುಕ್ತರಿಗೆ ಮನವಿ ನೀಡಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸ್ ಆಯುಕ್ತರು ಅನುಮತಿ ನಿರಾಕರಿಸಿದ್ದಾರೆ.
ಇನ್ನು ಸಾಮಾಜಿಕ ಜಾಲತಾಣಗಳಲ್ಲೂ ಪ್ರತಿಭಟನೆಗೆ ವಿರೋಧ ವ್ಯಕ್ತವಾಗಿ, ಇ-ಮೇಲ್ ಮೂಲಕ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸುವ ಅಭಿಯಾನವೂ ಸಹ ಪ್ರತಿಭಟನೆಗೆ ಅನುಮತಿ ನಿರಾಕರಿಸುವುದರಲ್ಲಿ ಪ್ರಮುಖ ಪಾತ್ರವಹಿಸಿದೆ.  ಕಾಶ್ಮೀರದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆ ಉಗ್ರ ಬುರ್ಹಾನ್ ಮುಜಾಫರ್ ವಾನಿ ಹತ್ಯೆ ಖಂಡಿಸಿ ನಡೆಯುತ್ತಿರುವ ಪ್ರತಿಭಟನೆಗೆ ಬೆಂಗಳೂರಿನಲ್ಲಿ ಕೆಲವು ಕಿಡಿಗೇಡಿ ಸಂಘಟನೆಗಳು ಬೆಂಬಲ ಸೂಚಿಸಿ ಜು.16ರಂದು ಮೈಸೂರು ಬ್ಯಾಂಕ್ ವೃತ್ತದಲ್ಲಿ ಕಾಶ್ಮೀರಿ ಪ್ರತ್ಯೇಕತವಾದಿಗಳಿಗೆ ಬೆಂಬಲ ಸೂಚಿಸಿ ಸಂಜೆ 5ಕ್ಕೆ, ಸೇನೆ ವಿರುದ್ಧ ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸಿದ್ದವು.

ಈ ವಿಭಾಗದ ಇತರ ಸುದ್ದಿ

No stories found.

Advertisement

X

Advertisement

X
Kannada Prabha
www.kannadaprabha.com