
ಬೆಂಗಳೂರು: ಸಾಕಷ್ಟು ವಿರೋಧಗಳ ನಡುವೆಯೂ ರಾಜ್ಯ ಸರ್ಕಾರ ಡಿವೈಎಸ್ಪಿ ಗಣಪತಿಯವರ ಆತ್ಮಹತ್ಯೆ ಪ್ರಕರಣವನ್ನು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕೆ.ಎನ್. ಕೇಶವನಾರಾಯಣ ಅವರ ನೇತೃತ್ವದಲ್ಲಿ ತನಿಖೆಗೆ ಆದೇಶಿಸಿದೆ.
ಪ್ರತಿಪಕ್ಷಗಳ ಒತ್ತಡಕ್ಕೆ ಮಣಿದಿದ್ದ ರಾಜ್ಯ ಸರ್ಕಾರ ಗಣಪತಿಯವರ ಆತ್ಮಹತ್ಯೆ ಪ್ರಕರಣವನ್ನು ಇತ್ತೀಚೆಗಷ್ಟೇ ನ್ಯಾಯಾಂಗ ತನಿಖೆಗೆ ಆದೇಶಿಸಿತ್ತು.
ಇದರಂತೆ ತನಿಖೆಗೆ ನ್ಯಾ.ಕೇಶವನಾರಾಯಣ ಅವರ ಏಕಸದಸ್ಯ ಆಯೋಗ ರಚಿಸಿ ಆದೇಶ ಹೊರಡಿಸಿದ್ದು, ವಿಚಾರಣೆಗೆ ಆರು ತಿಂಗಳ ಕಾಲಾವಕಾಶವನ್ನು ನೀಡಿದೆ. ಅಲ್ಲದೆ, ವಿಚಾರಣಾ ಆಯೋಗದ ಕಾಯ್ದೆಯಂತೆ ಇರುವ ಅಧಿಕಾರ ಬಳಸಿ ವಿಚಾರಣೆ ನಡೆಸಿ, ವರದಿಯನ್ನು ಸಲ್ಲಿಸುವಂತೆ ಆಯೋಗಕ್ಕೆ ಸರ್ಕಾರ ಸೂಚನೆ ನೀಡಿದೆ.
ವಿಚಾರಣೆ ಆಯೋಗಕ್ಕೆ ನಗರದಲ್ಲಿ ಕಚೇರಿ ವ್ಯವಸ್ಥೆ ಕಲ್ಸಿಸುವುದಾಗಿ ರಾಜ್ಯ ಸರ್ಕಾರ ಹೇಳಿದ್ದು, ಆಡಳಿತ ವಿಭಾಗವು ಆಯೋಗಕ್ಕೆ ಬೇಕಾದ ಕಚೇರಿ, ಸಿಬ್ಬಂದಿ ಸೇರಿದಂತೆ ತನಿಖೆಗೆ ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕೆಂದು ಹೇಳಿದೆ.
Advertisement