ಶ್ರೀರಂಗಪಟ್ಟಣ ಬಳಿ ಭೀಕರ ರಸ್ತೆ ಅಪಘಾತ: ಬಿಬಿಎಂಪಿ ಸದಸ್ಯ ಸೇರಿ ಮೂವರ ದುರ್ಮರಣ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗೌರಿಪುರ ಗ್ರಾಮದ ಬಳಿ ಮೈಸೂರು -ಬೆಂಗಳೂರು ಹೆದ್ದಾರಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಪಾಲಿಕೆ ಸದಸ್ಯ .,..
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಶ್ರೀರಂಗಪಟ್ಟಣ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ  ಗೌರಿಪುರ ಗ್ರಾಮದ ಬಳಿ ಮೈಸೂರು -ಬೆಂಗಳೂರು ಹೆದ್ದಾರಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಪಾಲಿಕೆ ಸದಸ್ಯ ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಎರಡು ಕಾರುಗಳ ನಡುವೆ ಭಾನುವಾರ ಬೆಳಿಗ್ಗೆ  ಸಂಭವಿಸಿದ ಭೀಕರ ಅಪಘಾತದಲ್ಲಿ ಲಕ್ಕಸಂದ್ರ ವಾರ್ಡ್‌ನ ಬಿಬಿಎಂಪಿ ಸದಸ್ಯ ಮಹೇಶ್‌ ಬಾಬು(40) ,ಮಿದಾ ಶರೀಫ್ (45),ಬಾಲಾಜಿ (40) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಿಲಾಗಿದೆ.

ಶ್ರೀರಂಗಪಟ್ಟಣ ಡಿವೈಎಪಿ ಸೇರಿದಂತೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತ ವಾಗಿತ್ತು. ಸ್ಥಳಕ್ಕಾಗಮಿಸಿದ ಪೊಲೀಸರು ವಾಹನಗಳನ್ನು ತೆರವುಗೊಳಿಸಿ ಸಂಚಾರಕ್ಕೆ ಅನವು ಮಾಡಿಕೊಟ್ಟರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com