ಲೋಕಾಯುಕ್ತ ಐಜಿಪಿ ಪ್ರಣಬ್ ಮೊಹಾಂತಿ ಹಾಗೂ ಎಡಿಜಿಪಿ ಎ.ಎಂ. ಪ್ರಸಾದ್
ಲೋಕಾಯುಕ್ತ ಐಜಿಪಿ ಪ್ರಣಬ್ ಮೊಹಾಂತಿ ಹಾಗೂ ಎಡಿಜಿಪಿ ಎ.ಎಂ. ಪ್ರಸಾದ್

ಗಣಪತಿ ಆತ್ಮಹತ್ಯೆ ಪ್ರಕರಣ: ತೀರ್ಪು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಐಪಿಎಸ್ ಅಧಿಕಾರಿಗಳು

ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳುವಂತೆ ಸೆಷನ್ಸ್ ನ್ಯಾಯಾಲಯ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಇಬ್ಬರು...

ಬೆಂಗಳೂರು: ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳುವಂತೆ ಸೆಷನ್ಸ್ ನ್ಯಾಯಾಲಯ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಇಬ್ಬರು ಐಪಿಎಸ್ ಅಧಿಕಾರಿಗಳು ಮಂಗಳವಾರ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಮಂಗಳೂರು ಡಿವೈಎಸ್ಪಿ ಗಣಪತಿಯವರು ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮುನ್ನ ಖಾಸಗಿ ವಾಹನಿಯೊಂದಕ್ಕೆ ಸಂದರ್ಶನವೊಂದನ್ನು ನೀಡಿದ್ದರು. ಸಂದರ್ಶನದಲ್ಲಿ ನನಗೇನಾದರೂ ಆದರೆ  ಕೆ.ಜೆ.ಜಾರ್ಜ್, ಎಡಿಜಿಪಿ ಎ.ಎಂ. ಪ್ರಸಾದ್ ಮತ್ತು ಲೋಕಾಯುಕ್ತ ಐಜಿಪಿ ಪ್ರಣಬ್ ಮೊಹಾಂತಿಯವರೇ ನೇರಹೊಣೆಯಾಗಿರುತ್ತಾರೆಂದು ಹೇಳಿದ್ದರು. ಈ ಪ್ರಕರಣ ರಾಜ್ಯದಾದ್ಯಂತ ಸಾಕಷ್ಟು ವಿವಾದ ಹಾಗೂ ಚರ್ಚೆಯನ್ನು ಹುಟ್ಟುಹಾಕಿತ್ತು.

ಪ್ರತಿಪಕ್ಷಗಳ ಒತ್ತಡಕ್ಕೆ ಮಣಿದಿದ್ದ ರಾಜ್ಯ ಸರ್ಕಾರ ಇತ್ತೀಚೆಗಷ್ಟೇ ಕೆ.ಜೆ.ಜಾರ್ಜ್ ಅವರಿಂದ ರಾಜೀನಾಮೆ ಪತ್ರವನ್ನು ಪಡೆದುಕೊಂಡಿತ್ತು.

ತಂದೆ ಆತ್ಮಹತ್ಯೆ ಸಂಬಂಧಿಸಿ ಪುತ್ರ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲು ಹೋದಾಗ ಪೊಲೀಸರು ಎಫ್ಐಆರ್ ದಾಖಲಿಸಲು ನಿರಾಕರಿಸಿದ್ದರು. ನಂತರ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಖಾಸಗಿ ದೂರನ್ನು ದಾಖಲಿಸಿದ್ದರು. ಇದರಂತೆ ಪ್ರಕರಣ ಸಂಬಂಧ ಆದೇಶ ನೀಡಿದ್ದ ಮಡಿಕೇರಿ ಸೆಷನ್ಸ್ ನ್ಯಾಯಾಲಯವು ಕೆ,ಜೆ.ಜಾರ್ಜ್, ಪ್ರಸಾದ್ ಮತ್ತು ಮೊಹಾಂತಿ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಪೊಲೀಸರಿಗೆ ಸೂಚನೆ ನೀಡಿತ್ತು.

ಈ ಆದೇಶವನ್ನು ಪ್ರಶ್ನಿಸಿ ಇದೀಗ ಎಡಿಜಿಪಿ ಎ.ಎಂ. ಪ್ರಸಾದ್ ಮತ್ತು ಲೋಕಾಯುಕ್ತ ಐಜಿಪಿ ಪ್ರಣಬ್ ಮೊಹಾಂತಿಯವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆಂದು ತಿಳಿದುಬಂದಿದೆ.

Related Stories

No stories found.

Advertisement

X
Kannada Prabha
www.kannadaprabha.com