ಜನದಟ್ಟಣೆ ಸಮಯದಲ್ಲಿ 6 ನಿಮಿಷಕ್ಕೊಂದು ಮೆಟ್ರೋ ರೈಲು ಸಂಚಾರ

ದಿನೇ ದಿನೇ ಮೆಟ್ರೋ ರೈಲಿನಲ್ಲಿ ಸಂಚರಿಸುವ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಮೆಟ್ರೋ ರೈಲು ಪ್ರಾಧಿಕಾರ ರೈಲುಗಳ ಸಂಖ್ಯೆ ಹೆಚ್ಚಳಕ್ಕೆ ನಿರ್ಧರಿಸಿದ್ದು, ಬುಧವಾರದಿಂದ ಪ್ರತೀ 6 ನಿಮಿಷಕ್ಕೆ ಒಂದು ರೈಲು ಓಡಿಸಲು ನಿರ್ಧರಿಸಿದೆ.
ಮೆಟ್ರೋ ರೈಲು (ಸಂಗ್ರಹ ಚಿತ್ರ)
ಮೆಟ್ರೋ ರೈಲು (ಸಂಗ್ರಹ ಚಿತ್ರ)
Updated on: 

ಬೆಂಗಳೂರು: ದಿನೇ ದಿನೇ ಮೆಟ್ರೋ ರೈಲಿನಲ್ಲಿ ಸಂಚರಿಸುವ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಮೆಟ್ರೋ ರೈಲು ಪ್ರಾಧಿಕಾರ ರೈಲುಗಳ ಸಂಖ್ಯೆ ಹೆಚ್ಚಳಕ್ಕೆ ನಿರ್ಧರಿಸಿದ್ದು,  ಬುಧವಾರದಿಂದ ಪ್ರತೀ 6 ನಿಮಿಷಕ್ಕೆ ಒಂದು ರೈಲು ಓಡಿಸಲು ನಿರ್ಧರಿಸಿದೆ.

ಪ್ರಮುಖವಾಗಿ ಜನದಟ್ಟಣೆ ಸಮಯದಲ್ಲಿ ಹೆಚ್ಚೆಚ್ಚು ರೈಲು ಓಡಿಸಲು ಪ್ರಾಧಿಕಾರ ನಿರ್ಧರಿಸಿದ್ದು, ಪ್ರಸ್ತುತ ಅತೀ ಹೆಚ್ಚು ಪ್ರಯಾಣಿಕರು ಸಂಚರಿಸುತ್ತಿರುವ ಪೂರ್ವ-ಪಶ್ಚಿಮ ಕಾರಿಡಾರ್ ನಲ್ಲಿ  ಹೆಚ್ಚೆಚ್ಚು ರೈಲು ಓಡಿಸಲು ನಿರ್ಧರಿಸಲಾಗಿದೆ.  ಹೀಗಾಗಿ ಬೆಳಗ್ಗೆ ಹಾಗೂ ಸಂಜೆಯ ಜನದಟ್ಟಣೆ ಸಮಯದಲ್ಲಿ ಮೆಟ್ರೋ ರೈಲು ಸಂಚಾರ ಸಮಯದ ಅಂತರವನ್ನು ಬೆಂಗಳೂರು ಮೆಟ್ರೋ ರೈಲು  ನಿಗಮ ಇಳಿಸಿದ್ದು, ಬೈಯಪ್ಪನಹಳ್ಳಿ ಕಡೆಯಿಂದ ಬೆಳಗ್ಗೆ 7.46ರಿಂದ 9.10ರವರೆಗೆ ಹಾಗೂ ಸಂಜೆ 5ರಿಂದ 7.54ರವರೆಗೆ ಪ್ರತಿ 6 ನಿಮಿಷಕ್ಕೊಂದು ಮೆಟ್ರೋ ರೈಲು ಸಂಚರಿಸಲಿದೆ. ಅದೇ ರೀತಿ  ಮೈಸೂರು ರಸ್ತೆಯಿಂದ ಬೆಳಗ್ಗೆ 8.22ರಿಂದ 9.52ವರೆಗೆ ಹಾಗೂ ಸಂಜೆ 5.48 ರಿಂದ 8.37ರವರೆಗೆ ಪ್ರತಿ 6 ನಿಮಿಷಕ್ಕೊಂದು ಮೆಟ್ರೋ ರೈಲು ಸಂಚರಿಸಲಿದೆ ಎಂದು ತಿಳಿದುಬಂದಿದೆ.

ಈ ಹಿಂದೆ ಈ ಮಾರ್ಗದಲ್ಲಿ ಇದೇ ಸಮಯದಲ್ಲಿ ಪ್ರತಿ 8 ನಿಮಿಷಕ್ಕೊಮ್ಮೆ ರೈಲು ಸಂಚಾರ ನಡೆಯುತ್ತಿತ್ತು. ಬೆಳಗ್ಗೆ 6 ರಿಂದ 7.15ರವರೆಗೆ ಹಾಗೂ ವಾರಾಂತ್ಯದಲ್ಲಿ ಬೆಳಗ್ಗೆ 6 ರಿಂದ 9  ಗಂಟೆಯವರೆಗೆ ಪ್ರತಿ 15 ನಿಮಿಷಕ್ಕೊಂದು ಮೆಟ್ರೋ ಸಂಚರಿಸಲಿದೆ ಎಂದು ಬಿಎಂಆರ್‌ಸಿಎಲ್ ಎಂಡಿ ಪ್ರದೀಪ್ ಸಿಂಗ್ ಖರೋಲಾ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com