ಬೆಂಗಳೂರು: ಮಂಗಳೂರು ಐಜಿಪಿ ಕಚೇರಿಯ ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ಮೂರನೇ ಆರೋಪಿ ಎ.ಎಂ.ಪ್ರಸಾದ್ ಅವರಿಗೆಗಾಗಿ ರಾಜ್ಯ ಸರ್ಕಾರ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಸಮಾನವಾದ ಹೊಸ ಹುದ್ದೆಯೊಂದನ್ನು ಸೃಷ್ಟಿ ಮಾಡಿದೆ.
ರಾಜ್ಯ ಗುಪ್ತದಳದ ಮುಖ್ಯಸ್ಥರಾಗಿದ್ದ ಎ.ಎಂ.ಪ್ರಸಾದ್ ಅವರನ್ನು ಶುಕ್ರವಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರ, ಬೆಂಗಳೂರು ನಗರ ಸಂಚಾರ ವಿಭಾಗ ಪೊಲೀಸ್ ಆಯುಕ್ತರನ್ನಾಗಿ ನೇಮಕ ಮಾಡಿದೆ.
ಈ ಹಿಂದೆ ಇದ್ದ ಸಂಚಾರ ವಿಭಾಗ ಹೆಚ್ಚುವರಿ ಪೊಲೀಸ್ ಆಯುಕ್ತ ಹುದ್ದೆಯನ್ನು ರದ್ದುಪಡಿಸಿ, ಪ್ರಸಾದ್ ಗಾಗಿ ಸಂಚಾರ ವಿಭಾಗ ಪೊಲೀಸ್ ಆಯುಕ್ತ ಹುದ್ದೆಯನ್ನು ಸೃಷ್ಟಿಸಲಾಗಿದೆ.
ಇನ್ನು ಗಣಪತಿ ಪ್ರಕರಣದ ಎರಡನೇ ಆರೋಪಿ ಲೋಕಾಯುಕ್ತ ಎಡಿಜಿಪಿಯಾಗಿದ್ದ ಪ್ರೊಣವ್ ಮೊಹಾಂತಿ ಅವರು ಕೇಂದ್ರ ಸೇವೆಗೆ ನಿಯುಕ್ತಿಗೊಂಡಿದ್ದಾರೆ.