ಕೇಸ್ ವಾಪಸ್ ತೆಗೆದುಕೊಳ್ಳುವಂತೆ ಸಚಿವ ಮಹದೇವಪ್ಪ ಪುತ್ರನಿಂದ ಬೆದರಿಕೆ: ದೂರುದಾರ

ಅಕ್ರಮ ಮರಳು ಗಣಿಗಾರಿಕೆಗೆ ಸಂಬಂಧಿಸಿದಂತೆ ನೋಟಿಸ್‌ ಪಡೆದಿರುವ ಲೋಕೋಪಯೋಗಿ ಸಚಿವ ಡಾ. ಎಚ್‌.ಸಿ. ಮಹದೇವಪ್ಪ ಪುತ್ರ ಸುನಿಲ್‌ ಬೋಸ್‌...
ಮಹಾದೇವಪ್ಪ ಮತ್ತು ಸುನೀಲ್ ಬೋಸ್
ಮಹಾದೇವಪ್ಪ ಮತ್ತು ಸುನೀಲ್ ಬೋಸ್

ಮೈಸೂರು: ಅಕ್ರಮ ಮರಳು ಗಣಿಗಾರಿಕೆಗೆ ಸಂಬಂಧಿಸಿದಂತೆ ನೋಟಿಸ್‌ ಪಡೆದಿರುವ ಲೋಕೋಪಯೋಗಿ ಸಚಿವ ಡಾ. ಎಚ್‌.ಸಿ. ಮಹದೇವಪ್ಪ ಪುತ್ರ ಸುನಿಲ್‌ ಬೋಸ್‌ ನ್ಯಾಯಾಲಯದ ವಿಚಾರಣೆಗೆ ಗೈರು ಹಾಜರಾಗಿದ್ದಾರೆ. ಇದರಿಂದ ನ್ಯಾಯಾಧೀಶರು ವಿಚಾರಣೆಯನ್ನು ಆ.4ಕ್ಕೆ ಮುಂದೂಡಿದ್ದಾರೆ.

ತಾವು ನೀಡಿರುವ ದೂರು ವಾಪಸ್ ಪಡೆದುಕೊಳ್ಳುವಂತೆ ಹೇಳಿ ನನಗೆ ಬೆದಗಕೆ ಕರೆಗಳು ಬರುತ್ತಿವೆ. ಜೊತೆಗೆ 10 ಲಕ್ಷ ರು. ಲಂಚದ ಆಮೀಷ ಕೂಡ ನೀಡಲಾಗುತ್ತಿದೆ ಎಂದು ದೂರುದಾರ ಬಸವರಾಜು ಆರೋಪಿಸಿದ್ದಾರೆ. ನನ್ನ ಕಕ್ಷಿದಾರರಿಗೆ ಕೇಸ್ ವಾಪಸ್ ತೆಗೆದುಕೊಳುವಂತೆ ಆಗ್ರಹಿಸಿ ಬೆದರಿಕೆ ಕರೆಗಳು ಬರುತ್ತಿವೆ ಬಸವರಾಜು ಪರ ವಕೀಲ ಲೋಕೇಶ್ ತಿಳಿಸಿದ್ದಾರೆ.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕ ಕೆ. ರಾಮೇಶ್ವರಪ್ಪ ಲಕ್ಷ್ಮಿಪುರಂ ಮತ್ತು ಟಿ ನರಸಿಪುರ ಪೊಲೀಸ್ ಠಾಣೆಗಳಲ್ಲಿ ಸುಳ್ಳು ದೂರುಗಳನ್ನು ದಾಖಲಿಸಿದ್ದಾರೆ ಎಂದು ಬಸವರಾಜು ಆರೋಪಿಸಿದ್ದಾರೆ.

ಮರಳು ಪರವಾನಗಿ ನೀಡಲು ಗುತ್ತಿಗೆದಾರರೊಬ್ಬರಿಂದ ಲಂಚ ಪಡೆಯುವಂತೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಭೂ ವಿಜ್ಞಾನಿಗೆ ಪ್ರಚೋದನೆ ನೀಡಿದ್ದಾರೆಂಬ ಆರೋಪ ಎದುರಿಸುತ್ತಿರುವ ಸುನಿಲ್‌ ಬೋಸ್‌, ಕೋರ್ಟ್‌ಗೆ ಖುದ್ದು ಹಾಜರಾಗಬೇಕೆಂದು ಪ್ರಕರಣದ ವಿಚಾರಣೆ ನಡೆಸುತ್ತಿರುವ ಮೈಸೂರಿನ 3ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನೋಟಿಸ್‌ ಜಾರಿಗೊಳಿಸಿತ್ತು. ಆದರೆ ಬೋಸ್ ಹಾಜರಾಗಿರಲಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com