ಕಲಬುರಗಿಯಲ್ಲಿ ಪೊಲೀಸ್‌ ಮುಖ್ಯ ಪೇದೆ ಆತ್ಮಹತ್ಯೆಗೆ ಶರಣು

ರಾಜ್ಯದಲ್ಲಿ ಪೊಲೀಸ್ ಅಧಿಕಾರಿಗಳ ಆತ್ಮಹತ್ಯೆ ಸರಣಿ ಮುಂದುವರೆದಿದ್ದು, ಶುಕ್ರವಾರ ಕಲಬುರಗಿಯಲ್ಲಿ ಪೊಲೀಸ್ ಮುಖ್ಯ ಪೇದೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 
ಕಲಬುರಗಿ: ರಾಜ್ಯದಲ್ಲಿ ಪೊಲೀಸ್ ಅಧಿಕಾರಿಗಳ ಆತ್ಮಹತ್ಯೆ ಸರಣಿ ಮುಂದುವರೆದಿದ್ದು, ಶುಕ್ರವಾರ ಕಲಬುರಗಿಯಲ್ಲಿ ಪೊಲೀಸ್ ಮುಖ್ಯ ಪೇದೆ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಇಬ್ಬರು ಡಿವೈಎಸ್ಪಿಗಳ ಆತ್ಮಹತ್ಯೆ ಹಾಗೂ ಓರ್ವ ಮಹಿಳಾ ಪಿಎಸ್ ಐ ಆತ್ಮಹತ್ಯೆ ಪ್ರಕರಣದ ಬೆನ್ನಲ್ಲೇ ಕಲಬುರಗಿಯ ಮೀಸಲು ಪೋಲೀಸ್ ಪಡೆಯ ಪೊಲೀಸ್ ಹೆಡ್‌ ಕಾನ್ಸ್‌ಟೇಬಲ್‌ ಅಣ್ಣಾ ರಾವ್(50) ಅವರು ಇಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಗರದ ಹೊರವಲಯದ ತಾಜಸುಲ್ತಾನಪುರ ಕೆಎಸ್ಆರ್‌ಪಿ ಪೊಲೀಸ್ ಕ್ವಾಟರ್ಸ್‌‌ನಲ್ಲಿ ಅಣ್ಣಾ ರಾವ್ ಅವರು ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 
ವಿಜಯಪುರದ ಐಆರ್‌‌ಬಿ ಬೆಟಾಲಿಯನ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದ ಅಣ್ಣಾರಾವ್ ಅವರಿಗೆ ವಿಜಯಪುರದಿಂದ‌ ಕಲಬುರಗಿಗೆ ವರ್ಗಾವಣೆ ನೀಡದೇ ಇದ್ದಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಸ್ಥಳಕ್ಕೆ ಎಸ್ಪಿ ಎನ್ ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com