ಪುತ್ತೂರು: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸೇರಿದಂತೆ ಐವರು ಗಾಯಗೊಂಡಿರುವ ಘಟನೆ ಶನಿವಾರ ಬೆಳ್ತಂಗಡಿಯ ಗುಂಡ್ಯ ಸಮೀಪದ ನೆಲ್ಯಾಡಿ ಹೊರವಲಯದಲ್ಲಿ ನಡೆದಿದೆ.
ಬೆಂಗಳೂರಿಗೆ ತೆರಳುತ್ತಿದ್ದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎ,ಬಿ.ಇಬ್ರಾಹಿಂ ಅವರ ಫಾರ್ಜೂನರ್ ಕಾರಿಗೆ ಸ್ಕ್ವಾರ್ಪಿಯೋ ಡಿಕ್ಕಿಯಾಗಿದ್ದು, ಐಎಎಸ್ ಅಧಿಕಾರಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಆದರೆ ಇತರೆ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ದ.ಕ. ಜಿಲ್ಲಾಧಿಧಿಕಾರಿಯಾಗಿದ್ದ ಎ.ಬಿ. ಇಬ್ರಾಹಿಂ ಅವರು ಸಾರಿಗೆ ಮತ್ತು ರಸ್ತೆ ಸುರಕ್ಷಾ ಆಯುಕ್ತರಾಗಿ ಬೆಂಗಳೂರಿಗೆ ವರ್ಗಾವಣೆಯಾಗಿದ್ದು, ಈ ನಿಮಿತ್ತ ಬೆಂಗಳೂರಿಗೆ ತೆರಳುತ್ತಿದ್ದರು .
ಅಪಘಾತದಿಂದಾಗಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿದೆ. ಸ್ಕಾರ್ಪಿಯೋ ಕಾರು ಚಾಲಕನ ಅಜಾಗರೂಕತೆಯಿಂದಾಗಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ
ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.