ಸಾರಿಗೆ ನೌಕರರ ಮುಷ್ಕರ: ಜನರಿಂದ ಕಿಕ್ಕಿರಿದ ಮೆಟ್ರೋ

ಸಾರಿಗೆ ನೌಕರರ ಮುಷ್ಕರದಿಂದಾಗಿ ಕೆಎಸ್ಆರ್ಟಿಸಿ ಬಸ್ ಹಾಗೂ ಬಿಎಂಟಿಸಿ ಬಸ್ ಗಳು ರಸ್ತೆಗಿಳಿಯದ ಹಿನ್ನೆಲೆಯಲ್ಲಿ ಬೆಂಗಳೂರಿಗರು ಮೆಟ್ರೋವನ್ನು ಅವಲಂಬಿಸಿದ್ದಾರೆ...
ನಮ್ಮ ಮೆಟ್ರೋ
ನಮ್ಮ ಮೆಟ್ರೋ
Updated on: 

ಬೆಂಗಳೂರು: ಸಾರಿಗೆ ನೌಕರರ ಮುಷ್ಕರದಿಂದಾಗಿ ಕೆಎಸ್ಆರ್ಟಿಸಿ ಬಸ್ ಹಾಗೂ ಬಿಎಂಟಿಸಿ ಬಸ್ ಗಳು ರಸ್ತೆಗಿಳಿಯದ ಹಿನ್ನೆಲೆಯಲ್ಲಿ ಬೆಂಗಳೂರಿಗರು ಮೆಟ್ರೋವನ್ನು ಅವಲಂಬಿಸಿದ್ದಾರೆ.

ಒಂದೆಡೆ ರಸ್ತೆಗಿಳಿಯದ ಸರ್ಕಾರಿ ಬಸ್ ಗಳು ಮತ್ತೆಂದೆಡೆ ದುಪ್ಪಟ್ಟು ಹಣ ಪಡೆಯುತ್ತಿರುವ ಖಾಸಗಿ ಬಸ್ ಗಳು ಹಾಗೂ ಆಟೋಗಳಿಂದಾಗಿ ಜನರು ಮೆಟ್ರೋ ರೈಲಿನಲ್ಲಿ ಸಂಚರಿಸುತ್ತಿದ್ದು, ಮೆಟ್ರೋ ನಿಲ್ದಾಣಗಳು ಜನರಿಂದ ಕಿಕ್ಕಿರಿದಿದೆ. ಇನ್ನು ಜನ ದಟ್ಟನೆ ಹೆಚ್ಚಾಗುತ್ತಿದ್ದಂತೆ ಪ್ರತಿ ಐದು ನಿಮಿಷಕ್ಕೊಂದು ಮೆಟ್ರೋ ಸಂಚರಿಸುತ್ತಿದೆ.

ಇನ್ನು ಬೆಳಗ್ಗೆ 6 ಗಂಟೆಯಿಂದ 9 ಗಂಟೆ ನಡುವಣ ಸರಿ ಸುಮಾರು 18 ಸಾವಿರ ಜನರು ಪ್ರಯಾಣಿಸುತ್ತಿದ್ದು, ಸಾಮಾನ್ಯ ದಿನಗಳಲ್ಲಿ ಈ ಅವಧಿಯಲ್ಲಿ 13 ಸಾವಿರ ಜನರು ಪ್ರಯಾಣಿಸುತ್ತಿದ್ದು ಇಂದು ಐದು ಸಾವಿರ ಜನರು ಪ್ರಯಾಣಿಸಿದ್ದಾರೆ ಎಂದು ಎಂದು ಮೆಟ್ರೋ ಅಧಿಕಾರಿಗಳು ತಿಳಿಸಿದ್ದಾರೆ.

ಜನರ ನಿಯಂತ್ರಣಕ್ಕಾಗಿ ಹೆಚ್ಚುವರಿ ಸಿಬ್ಬಂದಿ ನಿಯೋಜನೆ
ನೌಕರರ ಮುಷ್ಕರದಿಂದಾಗಿ ಜನರು ಮೆಟ್ರೋ ರೈಲನ್ನು ಹೆಚ್ಚಾಗಿ ಬಳಸುತ್ತಿದ್ದರಿಂದ ಪ್ರತಿ ಮೆಟ್ರೋ ನಿಲ್ದಾಣದಲ್ಲೂ ಜನಜಂಗುಳಿ ಹೆಚ್ಚಾಗಿದ್ದು, ನಿಯಂತ್ರಣಕ್ಕಾಗಿ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. 15 ಮೆಟ್ರೋ ನಿಲ್ದಾಣಗಳಲ್ಲಿ ಹೆಚ್ಚುವರಿಯಾಗಿ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು. ಮೆಜೆಸ್ಟಿಕ್ ಮತ್ತು ಬೈಯಪ್ಪನಹಳ್ಳಿ ಟರ್ಮಿನಲ್ ಗಳಲ್ಲಿ ಹೆಚ್ಚು ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com