ಎಫ್ ಐ ಆರ್ ರದ್ದು ಕೋರಿದ್ದ ಅರ್ಜಿ ವಾಪಸ್ ಪಡೆದ ಮೊಹಾಂತಿ ಮತ್ತು ಪ್ರಸಾದ್

ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ದಾಖಲಾಗಿರುವ ಎಫ್‍ಐಆರ್‍ನ್ನು ರದ್ದುಗೊಳಿಸುವಂತೆ ಮೇಲ್ಮನವಿ ಸಲ್ಲಿಸಿದ್ದ ಹಿರಿಯ ಐಪಿಎಸ್ ಅಧಿಕಾರಿಗಳು ..
ಎ.ಎಂ ಪ್ರಸಾದ್ ಮತ್ತು ಪ್ರಣಬ್ ಮೊಹಾಂತಿ
ಎ.ಎಂ ಪ್ರಸಾದ್ ಮತ್ತು ಪ್ರಣಬ್ ಮೊಹಾಂತಿ

ಬೆಂಗಳೂರು: ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ದಾಖಲಾಗಿರುವ ಎಫ್‍ಐಆರ್‍ನ್ನು ರದ್ದುಗೊಳಿಸುವಂತೆ ಮೇಲ್ಮನವಿ ಸಲ್ಲಿಸಿದ್ದ ಹಿರಿಯ ಐಪಿಎಸ್ ಅಧಿಕಾರಿಗಳು ಇಂದು ತಮ್ಮ ಅರ್ಜಿಗಳನ್ನು ವಾಪಸ್ ಪಡೆದುಕೊಂಡಿದ್ದಾರೆ.

ಮಡಿಕೇರಿಯಲ್ಲಿ ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಡಿಕೇರಿ ಜಿಲ್ಲಾ ಕೋರ್ಟ್ ನೀಡಿದ್ದ ಆದೇಶಕ್ಕೆ ತಡೆ ಹಾಗೂ ಪ್ರಕರಣದ ರದ್ದು ಕೋರಿ ನೀಡಬೇಕೆಂದು ಕೋರಿ ಹಿರಿಯ ಅಧಿಕಾರಿಗಳಾದ ಮೊಹಂತಿ ಮತ್ತು ಪ್ರಸಾದ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ನಿಂದ ವಾಪಸ್ ಪಡೆದಿದ್ದಾರೆ.  

ಮಂಗಳೂರು ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆಗೂ ಮುನ್ನ ಖಾಸಗಿ ಟಿವಿ ಚಾನಲ್‍ಗೆ ಸಂದರ್ಶನ ನೀಡಿ, ಹಿಂದಿನ ಗೃಹ ಸಚಿವ ಕೆ.ಜೆ.ಜಾರ್ಜ್, ಎಡಿಜಿಪಿ ಎ.ಎಂ.ಪ್ರಸಾದ್, ಲೋಕಾಯುಕ್ತ ಹಿರಿಯ ಅಧಿಕಾರಿಯಾಗಿದ್ದ ಪ್ರಣಬ್ ಮೊಹಂತಿ ಅವರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ನೇಣಿಗೆ ಶರಣಾಗಿದ್ದರು.

ಗಣಪತಿ ಕುಟುಂಬ ಸದಸ್ಯರು ನ್ಯಾಯಾಲಯದ ಮೆಟ್ಟಿಲೇರಿದ್ದರಿಂದ ಈ ಮೂವರ ವಿರುದ್ಧ ಕೊಡಗು ಜಿಲ್ಲೆಯಲ್ಲಿ ಎಫ್‍ಐಆರ್ ದಾಖಲಾಗಿತ್ತು. ಈ ಎಫ್‍ಐಆರ್ ರದ್ದುಗೊಳಿಸುವಂತೆ ಪ್ರಣಬ್ ಮೊಹಂತಿ ಮತ್ತು ಪ್ರಸಾದ್ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com