ಕರ್ನಾಟಕ ಬಂದ್: ಆಸ್ತಿ-ಪಾಸ್ತಿಗೆ, ಶಾಂತಿಗೆ ಧಕ್ಕೆಯಾದರೆ ಕಠಿಣ ಕ್ರಮ: ಪರಮೇಶ್ವರ್ ಎಚ್ಚರಿಕೆ

ಮಹದಾಯಿ ನ್ಯಾಯಾಧಿಕರಣದ ತೀರ್ಪು ವಿರೋಧಿಸಿ ಕನ್ನಡಪರ ಸಂಘಟನೆಗಳು ನಡೆಸುತ್ತಿರುವ ಮುಷ್ಕರದ ವೇಳೆ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ಬಂದರೆ ಖಂಡಿತ ಕಠಿಣ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಗೃಹ ಸಚಿವ ಜಿ ಪರಮೇಶ್ವರ (ಸಂಗ್ರಹ ಚಿತ್ರ)
ಗೃಹ ಸಚಿವ ಜಿ ಪರಮೇಶ್ವರ (ಸಂಗ್ರಹ ಚಿತ್ರ)

ಬೆಂಗಳೂರು: ಮಹದಾಯಿ ನ್ಯಾಯಾಧಿಕರಣದ ತೀರ್ಪು ವಿರೋಧಿಸಿ ಕನ್ನಡಪರ ಸಂಘಟನೆಗಳು ನಡೆಸುತ್ತಿರುವ ಮುಷ್ಕರದ ವೇಳೆ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ಬಂದರೆ ಖಂಡಿತ ಕಠಿಣ  ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಗೃಹ ಸಚಿವ ಪರಮೇಶ್ವರ ಅವರು, ಮಹದಾಯಿ ನ್ಯಾಯಾಧಿಕರಣ ವಿರೋಧಿಸಿ ಕನ್ನಡ ಪರ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆ  ಶಾಂತಿಯುತವಾಗಿರಬೇಕು. ಯಾವುದೇ ಕಾರಣಕ್ಕೂ ಸಾರ್ವಜನಿಕರಿಗೆ ತೊಂದರೆ ನೀಡುವ ಅಥವಾ ಶಾಂತಿ ಕದಡುವ ಪ್ರಚೋದನೆಗಳಿಗೆ ಆಸ್ಪದ ನೀಡುವುದಿಲ್ಲ. ಅಂತಹ ಪರಿಸ್ಥಿತಿ  ಕಂಡುಬಂದರೆ ಖಂಡಿತಾ ಕಾನೂನು ರೀತ್ಯ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಕರ್ನಾಟಕ ಬಂದ್ ನಿಮಿತ್ತ ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ಪರಮೇಶ್ವರ ಅವರು ಮುಷ್ಕರದ ವೇಳೆ ಕಟ್ಟೆಚ್ಚರಿಂದ ಇರುವಂತೆ ಪೊಲೀಸರಿಗೆ ಸೂಚಿಸಿದ್ದಾರೆ. ಅಂತೆಯೇ  ಮುಷ್ಕರದ ವೇಳೆ ಸ್ಥಳದಲ್ಲೇ ಇದ್ದು ಪರಿಸ್ಥಿತಿ ನಿಯಂತ್ರಿಸುವಂತೆ ಮತ್ತು ಅಗತ್ಯ ಬಿದ್ದರೆ ಹೆಚ್ಚುವರಿ ಪಡೆಗಳನ್ನು ಬಳಿಸಿಕೊಳ್ಳುವಂತೆ ಹೇಳಿದ್ದಾರೆ. ಇದೇ ವೇಳೆ ಸಾರ್ವಜನಿಕ ಆಸ್ತಿ-ಪಾಸ್ತಿಗೆ ಮತ್ತು  ಸರ್ಕಾರಿ ಕಚೇರಿಗಳಿಗೆ ಹಾನಿ ಮಾಡದಂತೆ ಮನವಿ ಮಾಡಿರುವ ಪರಮೇಶ್ವರ ಅವರು, ಅಂತಹ ಪ್ರಕರಣಗಳೇನಾದರೂ ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com