ಮೈಸೂರು ನ್ಯಾಯಾಲಯದ ಶೌಚಾಲಯದಲ್ಲಿ ಸ್ಫೋಟ: ಘಟನಾ ಸ್ಥಳಕ್ಕೆ ಗೃಹ ಸಚಿವ ಪರಮೇಶ್ವರ್ ಭೇಟಿ

ಮೈಸೂರು ನ್ಯಾಯಾಲಯದ ಹಿಂಭಾಗದಲ್ಲಿರುವ ಶೌಚಾಲಯದಲ್ಲಿ ಸಣ್ಣ ಪ್ರಮಾಣದ ಸ್ಫೋಟ ಸಂಭವಿಸಿದೆ.
ಸ್ಫೋಟ
ಸ್ಫೋಟ
Updated on: 

ಮೈಸೂರು: ಮೈಸೂರು ನ್ಯಾಯಾಲಯದ ಹಿಂಭಾಗದಲ್ಲಿರುವ ಶೌಚಾಲಯದಲ್ಲಿ ಸಣ್ಣ ಪ್ರಮಾಣದ ಸ್ಫೋಟ ಸಂಭವಿಸಿದೆ.

ಸಂಜೆ 4.30ರ ಸುಮಾರಿಗೆ ಬಾಂಬ್ ಸ್ಫೋಟ ಮಾದರಿಯಲ್ಲಿ ಸ್ಫೋಟಗೊಂಡ ಶಬ್ದ ಕೇಳಿಬಂದಿದೆ. ಶೌಚಾಲಯದ ಕಿಟಕಿ ಗಾಜು, ಬಾಗಿಲು ಪುಡಿ ಪುಡಿಯಾಗಿವೆ. ಸದ್ಯ ನ್ಯಾಯಾಲಯ ಕೋರ್ಟ್ ಆವರಣದಲ್ಲಿ ಆತಂಕದ ವಾತಾವರಣ ಸೃಷ್ಠಿಯಾಗಿದೆ.

ಘಟನಾ ಸ್ಥಳಕ್ಕೆ ಲಕ್ಷ್ಮಿಪುರಂ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಶ್ವಾನದಳ, ಬಾಂಬ್ ನಿಷ್ಕ್ರಿಯ ದಳ ಘಟನಾ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದರು.

ಶೌಚಾಲಯದಲ್ಲಿ ಇನ್ನು ಎರಡು ಸ್ಫೋಟಗಳು ತುಂಬಿರುವ ಎರಡು ಅನುಮಾನಾಸ್ಪದ ಪೊಟ್ಟಣಗಳು ಪತ್ತೆಯಾಗಿದ್ದು ಮತ್ತಷ್ಟು ಆತಂಕಕ್ಕೆ ಕಾರಣವಾಗಿತ್ತು.

ಸಣ್ಣ ಪ್ರಮಾಣದ ಸ್ಫೋಟವಾದರೂ, ಪರಿಣಾಮ ಹೆಚ್ಚಿದೆ: ಗೃಹ ಸಚಿವ ಪರಮೇಶ್ವರ್
ಮೈಸೂರಿನ ನ್ಯಾಯಾಲಯದ ಹಿಂಬದಿ ಶೌಚಾಲಯದಲ್ಲಿ ನಿಗೂಢ ಸ್ಫೋಟ ಸಂಭವಿಸಿದ್ದು, ಸ್ಫೋಟದಿಂದ ಯಾರಿಗೂ ಯಾವುದೇ ತೊಂದರೆಯಾಗಿಲ್ಲ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಹೇಳಿದ್ದಾರೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಗೃಹ ಸಚಿವರು ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಮೈಸೂರು ನ್ಯಾಯಾಲಯದ ಶೌಚಾಲಯದಲ್ಲಿ ಸಣ್ಣ ಪ್ರಮಾಣದ ಸ್ಫೋಟ ಸಂಭವಿದೆ. ಆದರೆ ಅದರ ಪರಿಣಾಮ ಹೆಚ್ಚಿದೆ ಎಂದರು. ಸ್ಫೋಟದಿಂದಾಗಿ ಶೌಚಾಲಯದ ಗೋಡೆಗಳು ಬಿರುಕು ಬಿಟ್ಟಿವೆ. ಅದನ್ನು ಬಿಟ್ಟರೆ ಯಾರಿಗೂ ಯಾವುದೇ ತೊಂದರೆಯಾಗಿಲ್ಲ. ಸದ್ಯ ಘಟನೆ ಸಂಬಂಧ ತನಿಖೆ ನಡೆಯುತ್ತಿದ್ದು ತನಿಖೆ ಬಳಿಕವೇ ಪೂರ್ಣ ಪ್ರಮಾಣದ ವಿವರ ಸಿಗಲಿದೆ ಎಂದರು.

ಇದೇ ವೇಳೆ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಮುಖ್ಯ ನ್ಯಾಯಮೂರ್ತಿ ಮುಖರ್ಜಿ ಅವರು ಪರಿಶೀಲನೆ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com