ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಪಟ್ಟಿಯಲ್ಲಿ ಡಿ.ಕೆ. ಶಿವಕುಮಾರ್ ಗೆ ಟಾಪ್ ಸ್ಥಾನ

ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಇದೀಗ ಹೊಸ ಅಧ್ಯಕ್ಷನ ನೇಮಕಕ್ಕಾಗಿ ಚಿಂತನೆ ನಡೆಸುತ್ತಿದ್ದು, ಅಧ್ಯಕ್ಷ ಸ್ಥಾನ ಪಟ್ಟಿಯಲ್ಲಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರು...
ಇಂಧನ ಸಚಿವ ಡಿ.ಕೆ.ಶಿವಕುಮಾರ್
ಇಂಧನ ಸಚಿವ ಡಿ.ಕೆ.ಶಿವಕುಮಾರ್
Updated on: 

ಬೆಂಗಳೂರು: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಇದೀಗ ಹೊಸ ಅಧ್ಯಕ್ಷನ ನೇಮಕಕ್ಕಾಗಿ ಚಿಂತನೆ ನಡೆಸುತ್ತಿದ್ದು, ಅಧ್ಯಕ್ಷ ಸ್ಥಾನ ಪಟ್ಟಿಯಲ್ಲಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರು ಟಾಪ್ ಸ್ಥಾನದಲ್ಲಿದ್ದಾರೆಂದು ಹೇಳಲಾಗುತ್ತಿದೆ.

ಜೂನ್.20ರೊಳಗಾಗಿ ಹೊಸ ಅಧ್ಯಕ್ಷನನ್ನು ನೇಮಕ ಮಾಡಲು ಕಾಂಗ್ರೆಸ್ ಚಿಂತನೆ ನಡೆಸುತ್ತಿದ್ದು, ಡಿ.ಕೆ.ಶಿವಕುಮಾರ್ ಅವರಿಗೆ ಅಧ್ಯಕ್ಷ ಸ್ಥಾನ ನೀಡಲು ಚಿಂತನೆ ನಡೆಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ.

ಮುಂಬರುವ ಅಧಿವೇಶನದೊಳಗಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಭರ್ತಿ ಮಾಡಲು ಪಕ್ಷ ತೀರ್ಮಾನಿಸಿದ್ದು, ಇದಕ್ಕಾಗಿ ಗೃಹ ಸಚಿವ ಪರಮೇಶ್ವರ್ ಅವರೇ ಅವಧಿ ಮುಗಿದರೂ ಮತ್ತೆ 6 ತಿಂಗಳ ಕಾಲ ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆಯಲಿದ್ದಾರೆಂದು ಮೂಲಗಳು ತಿಳಿಸಿವೆ.

2018ರಲ್ಲಿ ಬರಲಿರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಹೈ ಕಮಾಂಡ್ ಈಗಾಗಲೇ ಸಿದ್ಧತೆ ನಡೆಸುತ್ತಿದ್ದು, ಮತ್ತೆ ಅಧಿಕಾರಕ್ಕೆ ಬರುವ ಸಲುವಾಗಿ ಹಲವಾರು ತಯಾರಿಗಳನ್ನು ಮಾಡಿಕೊಳ್ಳುತ್ತಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com