ಸಾಮೂಹಿಕ ಪ್ರತಿಭಟನೆ: ಪೊಲೀಸರ ಮನವೊಲಿಕೆಗೆ ಮುಂದುವರೆದ ಅಧಿಕಾರಿಗಳ ಯತ್ನ

ಬೆಂಗಳೂರು: ಪೊಲೀಸರ ಸಾಮೂಹಿಕ ಪ್ರತಿಭಟನೆಯನ್ನು ಹತ್ತಿಕ್ಕಲು ಸತತ ಪ್ರಯತ್ನ ನಡೆಸುತ್ತಿರುವ ಪೊಲೀಸ್ ಹಿರಿಯ ಅಧಿಕಾರಿಗಳು, ಇದೀಗ ಸ್ವತಃ ಅಧಿಕಾರಿಗಳ ಪೊಲೀಸ್ ಸಿಬ್ಬಂದಿ ವಾಸ ಮಾಡುವ ವಸತಿ ಗೃಹಗಳಿಗೆ ಭೇಟಿ ನೀಡಿ ಪೊಲೀಸರ ಕುಂದುಕೊರತೆಗಳನ್ನು ಆಲಿಸಲು ಮುಂದಾಗಿದ್ದಾರೆ.
ಈ ಹಿಂದೆ ಪೊಲೀಸ್ ವಸತಿ ಗೃಹಗಳಲ್ಲಿ ಸಾಕಷ್ಟು ಸಮಸ್ಯೆಗಳಿರುವುದಾಗಿ ಪೊಲೀಸರು ಹೇಳಿಕೊಂಡಿದ್ದರು. ಆದರೆ. ಪೊಲೀಸರು ಸಿಬ್ಬಂದಿಗಳು ಸಮಸ್ಯೆಗಳನ್ನು ಹೇಳಿಕೊಳ್ಳುತ್ತಿದ್ದರು ಇಲಾಖೆ ಮಾತ್ರ ತನಗೇನು ಗೊತ್ತಿಲ್ಲದಂತೆ ಮೌನವಹಿಸಿತ್ತು. ಇದೀಗ ಹೆಚ್ಚುವರಿ ಪೊಲೀಸ್ ಆಯುಕ್ತ (ಅಪರಾಧ) ಶರತ್ ಚಂದ್ರಾ ಮತ್ತು ಇನ್ನಿತರೆ ಅಧಿಕಾರಿಗಳು ಮಾಗಡಿ ರಸ್ತೆಯಲ್ಲಿರುವ ಪೊಲೀಸ್ ಸಿಬ್ಬಂದಿ ವಾಸ ಮಾಡುವ ವಸತಿ ಗೃಹಗಳಿಗೆ ಭೇಟಿ ನೀಡಿ ಪೊಲೀಸರ ಸಮಸ್ಯೆಗಳನ್ನು ಆಲಿಸಿದ್ದಾರೆ.
ಮಾಗಡಿ ರಸ್ತೆಯ ಪೊಲೀಸ್ ವಸತಿ ಗೃಹದಲ್ಲಿರುವ ಪೇದೆಯೊಬ್ಬರು ಅಲ್ಲಿನ ಸಮಸ್ಯೆ ಕುರಿತಂತೆ ಮಾತನಾಡಿದ್ದು, ಇಲ್ಲಿನ ಕ್ವಾರ್ಟರ್ಸ್ ನಲ್ಲಿ 400ಕ್ಕೂ ಹೆಚ್ಚು ಮನೆಗಳಿದ್ದು, ಸರಿಯಾಗಿ ನೀರು ಸರಬರಾಜು ಆಗುತ್ತಿಲ್ಲ. ನೀರನ್ನು ಶೇಖರಿಸಿಟ್ಟುಕೊಳ್ಳಲು ಸಂಪ್ ಗಳಿಲ್ಲ. ಈ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೆ ತರಲಾಗಿತ್ತು. ಇದೀಗ ಅಧಿಕಾರಿಗಳೇ ಕಾಳಜಿವಹಿಸುತ್ತಿದ್ದಾರೆಂದು ಹೇಳಿದ್ದಾರೆ.
ಪೊಲೀಸ್ ಅಧಿಕಾರಿಗಳು ಹೇಳುವ ಪ್ರಕಾರ, ಕ್ವಾರ್ಟರ್ಸ್ ನಲ್ಲಿ 432 ನಿವಾಸಗಳಿವೆ. ಎಲ್ಲಾ ಮನೆಗಳನ್ನು ಪರಿಶೀಲನೆ ನಡೆಸಲಾಗಿದೆ. ಪೊಲೀಸರ ಕುಂದುಕೊರತೆಗಳನ್ನು ಕೇಳಲಾಗಿದೆ. ಕುಂದುಕೊರತೆಗಳ ವರದಿಯನ್ನು ನಗರದ ಪೊಲೀಸ್ ಆಯುಕ್ತರಿಗೆ ಸಲ್ಲಿಸಲಾಗುತ್ತದೆ ಎಂದು ಹೇಳಿದ್ದಾರೆ.
ಮೂರು ದಿನಗಳಿಗೊಮ್ಮೆ ನೀರು ಬರುತ್ತದೆ. ಕುಡಿಯುವ ನೀರಿನಲ್ಲಿ ಚರಂಡಿ ನೀರು ಮಿಶ್ರಣಗೊಂಡಿರುತ್ತದೆ. ಇನ್ನು ಆರೋಗ್ಯ ಭಾಗ್ಯ ಯೋಜನೆಯಡಿಯಲ್ಲಿ ಚಿಕಿತ್ಸೆ ನೀಡಲು ಆಸ್ಪತ್ರೆಗಳು ನಿರಾಕರಿಸುತ್ತಿವೆ ಹಾಗೂ ಇನ್ನಿತರೆ ಸಮಸ್ಯೆಗಳನ್ನು ಸಿಬ್ಬಂದಿಗಳು ಹೇಳಿಕೊಂಡಿದ್ದಾರೆ. ಸಮಸ್ಯೆಗಳನ್ನು ಪರಿಶೀಲಿಸಿ ನಂತರ ಬಗೆಹರಿಸಲಾಗುತ್ತದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


