ಹರಳು ಬೀಜ ತಿಂದು 60 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಶಾಲೆಯ ಬಳಿಯಿದ್ದ ಹರಳು ಬೀಜ ತಿಂದು 60ಕ್ಕೂ ಹೆಚ್ಚು ಮಕ್ಕಳು ಆಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಕುಂದಗೋಲ್ ತಾಲುಕಿನ ಶೆರೆವಾಡ...
ಹರಳು ಬೀಜ ತಿಂದು 60 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು
ಹರಳು ಬೀಜ ತಿಂದು 60 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು
Updated on: 

ಹುಬ್ಬಳ್ಳಿ: ಶಾಲೆಯ ಬಳಿಯಿದ್ದ ಹರಳು ಬೀಜ ತಿಂದು 60ಕ್ಕೂ ಹೆಚ್ಚು ಮಕ್ಕಳು ಆಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಕುಂದಗೋಲ್ ತಾಲುಕಿನ ಶೆರೆವಾಡ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ಅಸ್ವಸ್ಥಗೊಂಡಿರುವ ಎಲ್ಲಾ ಮಕ್ಕಳು ಸರ್ಕಾರಿ ಹಿರಿಯ ಪ್ರಥಮಿಕ ಶಾಲೆಯ ವಿದ್ಯಾರ್ಥಿಗಳಾಗಿದ್ದು, ಮಕ್ಕಳು ಶಾಲೆಯ ಬಳಿಯಿದ್ದ ಹರಳು ಬೀಜಗಳನ್ನು ಸೇವನೆ ಮಾಡಿರುವುದು ಅಸ್ವಸ್ಥಗೊಳ್ಳಲು ಕಾರಣವಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಹರಳು ಬೀಜ ತಿಂದ ಮಕ್ಕಳು ನಂತರ ಶಾಲೆಯಲ್ಲಿ ನೀಡಿದ್ದ ಹಾಲನ್ನು ಕುಡಿದಿದ್ದಾರೆ. ಈ ವೇಳೆ ಇದ್ದಕ್ಕಿದ್ದಂತೆ ಮಕ್ಕಳಿಗೆ ವಾಂತಿ, ಅತಿಸಾರ ಭೇದಿ, ನಿರ್ಜಲೀಕರಣ ಹಾಗೂ ಪ್ರಜ್ಞೆಹೀನತೆಯಂತಹ ಸಮಸ್ಯೆಗಳು ಎದುರಾಗಿದೆ. ಹರಳು ಬೀಜದಲ್ಲಿ ರಿಸಿನ್ ಎಂಬ ವಿಷಕಾರಿ ಅಂಶವಿದ್ದು, ಈ ಅಂಶ ಅನಾರೋಗ್ಯಕ್ಕೆ ದಾರಿ ಮಾಡಿಕೊಡಲಿದೆ.

ಇನ್ನು ಮಕ್ಕಳು ಅಸ್ವಸ್ಥರಾಗುತ್ತಿರುವುದನ್ನು ನೋಡಿದ ಗ್ರಾಮಸ್ಥರು ಮಕ್ಕಳನ್ನು ಕೂಡಲೇ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದರಂತೆ ಪ್ರಸ್ತುತ ಎಲ್ಲಾ ಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದು, ಮೂವರು ಮಕ್ಕಳ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ.

ಕಿಮ್ಸ್ ನಿರ್ದೇಶಕ ಡಾ.ಡಿ.ಡಿ. ಬಂಟ್ ಅವರು ಮಾತನಾಡಿ, ಆಸ್ಪತ್ರೆಗೆ ಬರುತ್ತಿದ್ದಂತೆ ಎಲ್ಲಾ ಮಕ್ಕಳಿಗೂ ಚಿಕಿತ್ಸೆ ನೀಡಲಾಗಿದೆ. ಮಕ್ಕಳ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತಿದೆ. ಕೆಲ ಮಕ್ಕಳನ್ನು ಐಸಿಯುವಿನಲ್ಲಿ ದಾಖಲು ಮಾಡಿಕೊಳ್ಳಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಕ್ಕಳ ಆರೋಗ್ಯ ಅವಲೋಕಿಸಿದ ನಂತರ ನಾಳೆ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com