ಪಿಯು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ಆರೋಪಿಗಳ ಜಾಮೀನು ಅರ್ಜಿ ತಿರಸ್ಕೃತ

ಪಿಯುಸಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳು ಸಲ್ಲಿಸಲಾಗಿದ್ದ ಜಾಮೀನು ಅರ್ಜಿಯನ್ನು ಹೈ ಕೋರ್ಟ್ ಗುರುವಾರ ತಿರಸ್ಕರಿಸಿದೆ...
ಪಿಯು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ಆರೋಪಿ ಓಬಳರಾಜು
ಪಿಯು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ಆರೋಪಿ ಓಬಳರಾಜು

ಬೆಂಗಳೂರು: ಪಿಯುಸಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳು ಸಲ್ಲಿಸಲಾಗಿದ್ದ ಜಾಮೀನು ಅರ್ಜಿಯನ್ನು ಹೈ ಕೋರ್ಟ್ ಗುರುವಾರ ತಿರಸ್ಕರಿಸಿದೆ.

ರಾಜ್ಯದಾದ್ಯಂತ ಭಾರೀ ಸದ್ದು ಮಾಡಿದ್ದ ಪಿಯುಸಿ ಪ್ರಶ್ನೆಪ್ರತ್ರಿಕೆ ಸೋರಿಕೆ ಪ್ರಕರಣದಲ್ಲಿ ಬಂಧಿತನಾಗಿರುವ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರು ಆಪ್ತ ಸಹಾಯಕ ಓಬಳರಾಜು ಹಾಗೂ ರಂಗನಾಥ್ ಎಂಬುವವರು ಜಾಮೀನು ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು.
    
ಇದರಂತೆ ಆರೋಪಿಗಳ ವಿರುದ್ಧ ಕೋಕಾ ಕಾಯ್ದೆ (ಕರ್ನಾಟಕ ಸಂಘಟಿತ ಅಪರಾಧ ತಡೆ ಕಾಯ್ದೆ) ಅಸ್ತ್ರ ಪ್ರಯೋಗಿಸಿ ವಿಚಾರಣೆ ನಡೆಸುತ್ತಿರುವ ವಿಶೇಷ ನ್ಯಾಯಾಲಯವು ನಿನ್ನೆ ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಅಲ್ಲದೆ, ಓಬಳರಾಜು ಹಾಗೂ ರಂಗನಾಥ್ ಅವರು ತರಬೇತಿ ಕೇಂದ್ರದ ಮಾಲೀಕರಾಗಿದ್ದು, ಇಬ್ಬರ ಬಳಿ ಬಲವಾದ ಸಾಕ್ಷ್ಯಾಧಾರಗಳಿದ್ದು, ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com