ಕುದುರೆ ವ್ಯಾಪಾರ ಪ್ರಕರಣ: ಶಾಸಕ ಮಲ್ಲಿಕಾರ್ಜುನ ಖೂಬಾ ವಿರುದ್ಧ ಎಫ್ಐಆರ್'ಗೆ ಆದೇಶ

ಕರ್ನಾಟಕದಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಯಲ್ಲಿ ಶಾಸಕರನ್ನು ಸೆಳೆಯಲು ಕುದುರೆ ವ್ಯಾಪಾರ ಮಾಡಲಾಗಿದೆ ಎಂಬ ಆರೋಪ ಪ್ರಕರಣ ಸಂಬಂಧ ಈಗಾಗಲೇ ಕ್ರಮ ಕೈಗೊಂಡಿರುವ...
ಜೆಡಿಎಸ್ ಶಾಸಕ ಮಲ್ಲಿಕಾರ್ಜುನ ಖೂಬಾ
ಜೆಡಿಎಸ್ ಶಾಸಕ ಮಲ್ಲಿಕಾರ್ಜುನ ಖೂಬಾ

ಬೆಂಗಳೂರು: ಕರ್ನಾಟಕದಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಯಲ್ಲಿ ಶಾಸಕರನ್ನು ಸೆಳೆಯಲು ಕುದುರೆ ವ್ಯಾಪಾರ ಮಾಡಲಾಗಿದೆ ಎಂಬ ಆರೋಪ ಪ್ರಕರಣ ಸಂಬಂಧ ಈಗಾಗಲೇ ಕ್ರಮ ಕೈಗೊಂಡಿರುವ ಚುನಾವಣಾ ಆಯೋಗವು ಜೆಡಿಎಸ್ ಶಾಸಕ ಮಲ್ಲಿಕಾರ್ಜುನ ಖೂಬಾ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳುವಂತೆ ಆದೇಶ ನೀಡಿದೆ.

ರಾಜ್ಯಸಭಾ ಚುನಾವಣೆ ವೇಳೆ ಲಂಚದ ಆರೋಪ ಕೇಳಿ ಬಂದಿದೆ. ಆದರೆ, ಚುನಾವಣೆಯನ್ನೇ ರದ್ದು ಪಡಿಸುವಂಷ್ಟು ದೊಡ್ಡ ಪ್ರಕರಣವಲ್ಲ. ಹೀಗಾಗಿ ಚುನಾವಣೆಯನ್ನು ಯಾವುದೇ ಕಾರಣಕ್ಕೂ ರದ್ದು ಪಡಿಸುವುದಿಲ್ಲ. ಪೂರ್ವನಿಗದಿತ ಸಮಯದಂತೆಯೇ ಜೂ.11ಕ್ಕೆ ಚುನಾವಣೆ ನಡೆಸಲಾಗುತ್ತದೆ ಎಂದು ಚುನಾವಣಾ ಆಯೋಗ ಹೇಳಿಕೊಂಡಿದೆ.

ಅಲ್ಲದೆ, ಲಂಚ ಆಮಿಷವನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಚುನಾವಣಾ ಆಯೋಗವು, ಶಾಸಕ ಮಲ್ಲಿಕಾರ್ಜುನ ಖೂಬಾ ಹಾಗೂ ಮತ್ತಿತರ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿಯಲ್ಲಿ ಎಫ್ಐಆರ್ ದಾಖಲಿಸಿಕೊಳ್ಳುವಂತೆ ಚುನಾವಣೆಯ ರಿಟರ್ನಿಂಗ್ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com