

ಬೆಂಗಳೂರು: ಆರ್ ಟಿಐ ಕಾರ್ಯಕರ್ತ ವಿನಾಯಕ ಪಾಂಡುರಂಗ ಬಾಳಿಗ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ನರೇಶ್ ಶೆಣೈ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈ ಕೋರ್ಟ್ ಗುರುವಾರ ತಿರಸ್ಕರಿಸಿದೆ.
ಕೆಲವು ದಿನಗಳ ಹಿಂದಷ್ಟೇ ಆರ್ ಟಿಐ ಕಾರ್ಯಕರ್ತರಾದ ವಿನಾಯಕ್ ಬಾಳಿಗರನ್ನು ಹತ್ಯೆ ಮಾಡಿದ ನಂತರ ನಮೋ ಬ್ರಿಗೇಡ್ ಮುಖ್ಯಸ್ಥರಾದ ನರೇಶ್ ಶೆಣೈ ಅವರು ತಲೆಮರೆಸಿಕೊಂಡಿದ್ದರು. ನಂತರ ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯವೊಂದರಲ್ಲಿ ನಿರೀಕ್ಷಣಾ ಜಾಮೀನು ಸಲ್ಲಿಸಿದ್ದರು. ಇದರಂತೆ ಜಿಲ್ಲಾ ನ್ಯಾಯಾಲಯ ನಿರೀಕ್ಷಣಾ ಜಾಮೀನನ್ನು ತಿರಸ್ಕರಿಸಿತ್ತು.
ಜಿಲ್ಲಾ ನ್ಯಾಯಾಲಯದ ತೀರ್ಪಿನ ನಂತರ ಶೆಣೈ ಪರ ವಕೀಲರು ಹೈ ಕೋರ್ಟ್ ಮೆಟ್ಟಿಲೇರಿದ್ದರು. ನಿರೀಕ್ಷಣಾ ಜಾಮೀನು ನೀಡುವಂತೆ ವಾದ ಮಂಡಿಸಿದ್ದರು. ಇದರಂತೆ ನಿನ್ನೆ ನಡೆದ ವಿಚಾರಣೆ ವೇಳೆ ವಾದ ವಿವಾದಗಳನ್ನು ಆಲಿಸಿದ ಹೈಕೋರ್ಟ್ ನ್ಯಾಯಾಧೀಶ ಫಣೀಂದ್ರ ಅವರು ನಿರೀಕ್ಷಣಾ ಜಾಮೀನು ರದ್ದುಪಡಿಸಿ ಆದೇಶ ನೀಡಿದ್ದಾರೆ.