ಸಿಇಟಿ ವಿದ್ಯಾರ್ಥಿಗಳಿಗೆ ಖಾಸಗಿ ಕಾಲೇಜುಗಳಲ್ಲಿ ಶೇಕಡಾ 40ರಷ್ಟು ವೈದ್ಯಕೀಯ ಸೀಟು

ವೈದ್ಯಕೀಯ ಕೋರ್ಸ್ ಗಳಿಗೆ ಸೀಟು ಹಂಚಿಕೆ ಬಿಕ್ಕಟ್ಟು ಬಗೆಹರಿದಿದೆ. ಸಾಮಾನ್ಯ ಪ್ರವೇಶ ಪರೀಕ್ಷೆಯಡಿ ವೈದ್ಯಕೀಯ ಕೋರ್ಸ್...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ವೈದ್ಯಕೀಯ ಕೋರ್ಸ್ ಗಳಿಗೆ ಸೀಟು ಹಂಚಿಕೆ ಬಿಕ್ಕಟ್ಟು ಬಗೆಹರಿದಿದೆ. ಸಾಮಾನ್ಯ ಪ್ರವೇಶ ಪರೀಕ್ಷೆಯಡಿ ವೈದ್ಯಕೀಯ ಕೋರ್ಸ್ ಗಳಿಗೆ ಪ್ರವೇಶ ಬಯಸಿದ್ದ ಅಭ್ಯರ್ಥಿಗಳಿಗೆ ಇಲ್ಲಿದೆ ಸಿಹಿಸುದ್ದಿ. ಈ ವರ್ಷ ಖಾಸಗಿ ಕಾಲೇಜುಗಳು ಶೇಕಡಾ 40ರಷ್ಟು ಸೀಟುಗಳನ್ನು ಸರ್ಕಾರದೊಂದಿಗೆ ಹಂಚಿಕೊಳ್ಳಲು ಒಪ್ಪಿವೆ. ಅದಕ್ಕೆ ಪ್ರತಿಯಾಗಿ ಸರ್ಕಾರ ಶೇಕಡಾ 10ರಷ್ಟು ಶುಲ್ಕ ಹೆಚ್ಚಿಸಲು ಸರ್ಕಾರ ಒಪ್ಪಿಕೊಂಡಿದೆ.

ಕರ್ನಾಟಕ ವೃತ್ತಿಪರ ಕಾಲೇಜುಗಳ ಒಕ್ಕೂಟದ ಉನ್ನತ ಮೂಲಗಳಿಂದ ಎಕ್ಸ್ ಪ್ರೆಸ್ ಪತ್ರಿಕೆಗೆ ಸಿಕ್ಕಿರುವ ಮಾಹಿತಿ ಪ್ರಕಾರ, ಸಿಇಟಿ ವಿದ್ಯಾರ್ಥಿಗಳಿಗೆ ಸೀಟು ನೀಡಲು ಮ್ಯಾನೇಜ್ ಮೆಂಟ್ ಕಾಲೇಜುಗಳು ಒಪ್ಪಿಕೊಂಡಿವೆ. ಇಂದು ಈ ಬಗ್ಗೆ ಅಧಿಕೃತ ಘೋಷಣೆ ಮಾಡಲಿವೆ.

ವೈದ್ಯಕೀಯ ಶಿಕ್ಷಣ ಸಚಿವರ ಜೊತೆಗೆ ದೂರವಾಣಿ ಮೂಲಕ ಮಾತುಕತೆ ನಡೆಸಿ ಸೀಟು ಹಂಚಿಕೆ ಪ್ರಸ್ತಾಪವನ್ನು ನಾವು ಒಪ್ಪಿಕೊಂಡಿದ್ದೇವೆ. ಅದಕ್ಕೆ ಪ್ರತಿಯಾಗಿ ನಾವು ವೈದ್ಯಕೀಯ ಕೋರ್ಸ್ ಶುಲ್ಕ ಹೆಚ್ಚಳ ಪ್ರಸ್ತಾಪವನ್ನು ಸರ್ಕಾರದ ಮುಂದಿಟ್ಟಿದ್ದೇವೆ ಎಂದು ಮೂಲಗಳು ತಿಳಿಸಿವೆ.

ಈ ಮೊದಲು ಸರ್ಕಾರ ಮತ್ತು ಖಾಸಗಿ ಕಾಲೇಜುಗಳು ನಡೆಸಿದ ಒಪ್ಪಂದದಂತೆ ಶೇಕಡಾ 10ರಷ್ಟು ಶುಲ್ಕ ಹೆಚ್ಚಳ ಮಾಡಲಾಗಿತ್ತು. ಅದರ ಜೊತೆಗೆ ಈಗ ಮತ್ತೆ ಶೇಕಡಾ 10ರಷ್ಟು ಶುಲ್ಕ ಹೆಚ್ಚಿಸಲಾಗುತ್ತಿದೆ. ಇವೆರಡೂ ಸೇರಿ ಹೊಸ ಒಪ್ಪಂದಕ್ಕೆ ಸಹಿ ಹಾಕಲಾಗುತ್ತದೆ. ಈ ಒಪ್ಪಂದ ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ಮಾತ್ರ ಅನ್ವಯವಾಗಲಿದೆ.

ಈ ಬಗ್ಗೆ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯೊಂದಿಗೆ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ್ ಪಾಟೀಲ್, ಒಕ್ಕೂಟದ ಸದಸ್ಯರು ನಮ್ಮ ಜೊತೆ ದೂರವಾಣಿಯಲ್ಲಿ ಮಾತುಕತೆ ನಡೆಸಿದ್ದಾರೆ. ನಾನೀಗ ಬೆಂಗಳೂರಿನಲ್ಲಿಲ್ಲ. ಅವರು ನಮ್ಮ ಪ್ರಸ್ತಾವಕ್ಕೆ ಒಪ್ಪಿಕೊಂಡಿದ್ದಾರೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com