ಯೋಗ ದಿನಾಚರಣೆಯಲ್ಲಿ ಸಿಎಂ ಸಿದ್ದು, ನಟಿ ಬಿಪಾಶ ಬಸು ಭಾಗಿ

ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ಯೋಗದಿನಾಚರಣೆಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಬಾಲಿವುಡ್ ನಟಿ ಬಿಪಾಶ ಬಸು ಪಾಲ್ಗೊಂಡಿದ್ದರು...
ಯೋಗ ದಿನಾಚರಣೆಯಲ್ಲಿ ಸಿಎಂ ಸಿದ್ದರಾಮಯ್ಯ, ನಟಿ ಬಿಪಾಶಬಸು ಮತ್ತು ಕೇಂದ್ರ ಸಚಿವ ಅನಂತ್ ಕುಮಾರ್
ಯೋಗ ದಿನಾಚರಣೆಯಲ್ಲಿ ಸಿಎಂ ಸಿದ್ದರಾಮಯ್ಯ, ನಟಿ ಬಿಪಾಶಬಸು ಮತ್ತು ಕೇಂದ್ರ ಸಚಿವ ಅನಂತ್ ಕುಮಾರ್
Updated on

ಬೆ೦ಗಳೂರು: ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ಯೋಗದಿನಾಚರಣೆಯಲ್ಲಿ ಸಿಎಂ  ಸಿದ್ದರಾಮಯ್ಯ ಮತ್ತು ಬಾಲಿವುಡ್ ನಟಿ ಬಿಪಾಶ ಬಸು ಪಾಲ್ಗೊಂಡಿದ್ದರು.

ಅಂತಾರಾಷ್ಟ್ರೀಯ ಯೋಗ ಆಚರಣೆ ಸಮಿತಿ ವತಿಯಿಂದ ನಡೆಸುತ್ತಿರುವ ಅಂತಾರಾಷ್ಟ್ರೀಯ ಯೋಗ ದಿನ ಆಚರಣೆಯಲ್ಲಿ ರಾಜ್ಯಾದ್ಯಂತ ಸುಮಾರು 4 ಲಕ್ಷಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದು,  ಒಟ್ಟು 30 ಜಿಲ್ಲೆಗಳಲ್ಲಿ ಏಕಕಾಲದಲ್ಲಿ ಯೋಗಾಭ್ಯಾಸ ಮಾಡಲಾಗುತ್ತಿದೆ.  ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಬೆಂಗಳೂರು ನಗರ ಒಂದರಲ್ಲೇ ಸುಮಾರು 3 ಲಕ್ಷ ಮಂದಿ ಭಾಗವಹಿಸಿದ್ದು,   ಯೋಗಾಭ್ಯಾಸದಲ್ಲಿ ನಿರತರಾಗಿದ್ದಾರೆ.

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಯೋಗ ದಿನ ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ದಿನದ 24 ಗಂಟೆಗಳಲ್ಲಿ 1 ಗಂಟೆ ಯೋಗಾಭ್ಯಾಸ ಮಾಡಿದರೂ 23  ಗಂಟೆಗಳು ಅಹ್ಲಾದಕರವಾಗಿರುತ್ತದೆ ಎಂದು ಹೇಳಿದರು. ಇಂದು ಬೆಳಗ್ಗೆ ಸುಮಾರು 8ಗಂಟೆಗೆ ಕಂಠೀರವ ಕ್ರೀಡಾಂಗಣಕ್ಕೆ ಆಗಮಿಸಿದ ಸಿದ್ದರಾಮಯ್ಯ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ  ವೇಳೆ ವಿಶೇಷ ಆಹ್ವಾನಿತರಾಗಿ ಆಗಮಿಸಿದ್ದ ಬಾಲಿವುಡ್‌ನ ಖ್ಯಾತ ನಟಿ ಬಿಪಾಶಾ ಬಸು, ಯೋಗಗುರು ವಚನಾನಂದ ಶ್ರೀಗಳೊಂದಿಗೆ ಸೇರಿ ತಮ್ಮ ಯೋಗ ಪ್ರತಿಭೆ ಅನಾವರಣಗೊಳಿಸಿದರು.

ಸಿಎಂ ಸಿದ್ದರಾಮಯ್ಯ ಕೂಡ ಯೋಗದಲ್ಲಿ ಪಾಲ್ಗೊಂಡು ಹಲವು ಆಸನಗಳನ್ನು ಮಾಡಿದರು. ಸಿದ್ದರಾಮಯ್ಯ ಅವರಿಗೆ ಕೇಂದ್ರ ಸಚಿವರಾದ ಅನಂತಕುಮಾರ್, ಡಿ.ವಿ.ಸದಾನಂದ ಗೌಡ, ರಾಜ್ಯದ  ಸಚಿವರಾದ ರೋಷನ್ ಬೇಗ್, ಟಿ.ಬಿ.ಜಯಚಂದ್ರ, ಡಿ.ಕೆ.ಶಿವಕುಮಾರ್, ಕೆ.ಜೆ.ಜಾರ್ಜ್ ಸೇರಿದಂತೆ ಹಲವು ಜನಪ್ರತಿನಿಧಿಗಳು ಸಾಥ್ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com