
ಬೆಂಗಳೂರು: ಸಚಿವ ಸಂಪುಟದಿಂದ ಕೈಬಿಟ್ಟಿದ್ದರಿಂದ ಅಸಮಾಧಾನಗೊಂಡಿರುವ ಮಾಜಿ ಸಚಿವ ಖಮರುಲ್ಲಾ ಇಸ್ಲಾಂ ಬಹಿರಂಗವಾಗಿಯೇ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಖಮರುಲ್ಲಾ ಇಸ್ಲಾಂ, ಕಾಂಗ್ರೆಸ್ ಮುಕ್ತ ಕರ್ನಾಟಕ ಕಾಂಗ್ರೆಸ್ ನಿಂದಲೇ ಆಗುತ್ತೆ ಎಂದು ಲೇವಡಿ ಮಾಡಿದ್ದಾರೆ. ಇನ್ನು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಮೊದಲಿನಂತಿಲ್ಲ. ಸಂಪುಟದಿಂದ ನನ್ನನ್ನು ಕೈಬಿಟ್ಟ ಕಾರಣವನ್ನು ಯಾವ ನಾಯಕರು ನನಗೆ ತಿಳಿಸಿಲ್ಲ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ ತಮ್ಮ ಸಂಪುಟದ ಹಿರಿಯ ಸಚಿವರಿಗೆ ಕೊಕ್ ನೀಡಿದ್ದು, ಹಲವು ನಾಯಕರ ಕೆಂಗಣ್ಣಿಗೆ ಗುರಿಯಾಗಿದೆ. ವಿನಾಃ ಕಾರಣ ನಮ್ಮನ್ನು ಸಂಪುಟದಿಂದ ಕೈಬಿಟ್ಟಿದ್ದಾರೆ ಎಂದು ಮಾಜಿ ಸಚಿವರು ಆರೋಪಿಸಿದ್ದಾರೆ.
Advertisement