ಮಂಗಳೂರು: ಆರ್ ಟಿಐ ಕಾರ್ಯಕರ್ತ ವಿನಾಯಕ ಪಾಂಡುರಂಗ ಬಾಳಿಗ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿದ್ದ ಪ್ರಮುಖ ಆರೋಪಿ ನರೇಶ್ ಶೆಣೈರನ್ನು ಸಿಸಿಬಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ವಿನಾಯಕ್ ಬಾಳಿಗ ಹತ್ಯೆಯ ನಂತರ ತಲೆಮರೆಸಿಕೊಂಡಿದ್ದ ನಮೋ ಬ್ರಿಗೇಡ್ ಮುಖ್ಯಸ್ಥರಾದ ನರೇಶ್ ಶೆಣೈರನ್ನು ಇಂದು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೆಲವು ದಿನಗಳ ಹಿಂದೆ ನರೇಶ್ ಶೆಣೈ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯ ವಜಾಗೊಳಿಸಿತ್ತು. ನಂತರ ಹೈಕೋರ್ಟ್ ಸಹ ಆರೋಪಿಗೆ ಜಾಮೀನು ನೀಡಲು ನಿರಾಕರಿಸಿತ್ತು.
ಕಳೆದ ಮಾ. 21ರಂದು ವಿನಾಯಕ ಬಾಳಿಗಾ ಅವರನ್ನು ದುಷ್ಕರ್ಮಿಗಳು ಅವರ ಮನೆಯ ಬಳಿ ಕೊಲೆ ಮಾಡಿದ್ದರು.